ಡಾ. ಎಂ.ಎಂ. ಕಲಬುರ್ಗಿ ಟ್ರಸ್ಟ್‌ಗೆ ಸಮಿತಿ ರಚನೆ

D MM K
Published on

ಬೆಂಗಳೂರು: ಕನ್ನಡ ಸಾಹಿತ್ಯ ಲೋಕಕ್ಕೆ ಅನುಪಮ ಸೇವೆ ಸಲ್ಲಿಸಿರುವ ಡಾ.ಎಂ.ಎಂ.ಕಲಬುರ್ಗಿ ಅವರ ಹೆಸರಿನಲ್ಲಿ ಸ್ಥಾಪಿಸಲಾಗುತ್ತಿರುವ ಡಾ.ಎಂ.ಎಂ.ಕಲಬುರ್ಗಿ ಟ್ರಸ್ಟ್ ಗೆ ಡಾ.ವೀರಣ್ಣ ರಾಜೂರ್ ಅಧ್ಯಕ್ಷತೆಯಲ್ಲಿ 9 ಸದಸ್ಯರ ಸಮಿತಿ ರಚಿಸಿ ಸರ್ಕಾರ ಆದೇಶಿಸಿದೆ.

ಡಾ. ಎಂ.ಎಂ.ಕಲಬುರ್ಗಿ ಪುತ್ರ ಶ್ರೀವಿಜಯ ಕಲಬುರ್ಗಿ, ಶಶಿಧರ್ ತೋಡ್ಕರ್, ಹನುಮಾಕ್ಷಿ ಗೋಗಿ, ಡಾ.ಎಚ್.ಎಸ್.ಮೇಲಿನಮನಿ, ಡಾ. ಬಾಳಣ್ಣ ಶೀಗೀಹಳ್ಳಿ, ಡಾ.ಸಿದ್ದನಗೌಡ ಪಾಟೀಲ್, ಪ್ರೊ. ಚಂದ್ರಶೇಖರ್ ವಸ್ತ್ರದ್ ಅವರನ್ನು ಸದಸ್ಯರಾಗಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧಾರವಾಡದ ಸಹಾಯಕ ನಿರ್ದೇಶಕರನ್ನು ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಗೀತಾಬಾಯಿ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net