ಡಾ.ಮಂಜುನಾಥ್ ಜಯಭೇರಿ; 101 ತೆಂಗಿನ ಕಾಯಿ ಒಡೆದು ಹರಕೆ ತೀರಿಸಿದ ಬೆಂಬಲಿಗರು!

dk
Published on

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ತೀವ್ರ ಗಮನ ಸೆಳೆದಿದ್ದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ.ಸಿ.ಎನ್‌. ಮಂಜುನಾಥ್‌ ಭರ್ಜರಿ ಗೆಲುವು ಸಾಧಿಸಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸೋದರ ಡಿಕೆ ಸುರೇಶ್‌ ಅವರನ್ನು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಅಳಿಯ ಸೋಲಿಸಿದ್ದಾರೆ.

ಡಿಕೆ ಸುರೇಶ್‌ ವಿರುದ್ಧ ಡಾ. ಸಿಎನ್ ಮಂಜುನಾಥ್ ಬರೋಬ್ಬರಿ 2,29,947 ಮತಗಳಿಗೂ ಹೆಚ್ಚು ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ 9,54,560 ಮತಗಳನ್ನು ಗಳಿಸಿದರೆ, ಡಿಕೆ ಸುರೇಶ್‌ 7,50,886 ಮತಗಳನ್ನು ಗಳಿಸಲಷ್ಟೇ ಶಕ್ತರಾಗಿ ಸೋಲೊಪ್ಪಿಕೊಂಡಿದ್ದಾರೆ.

ಈ ಫಲಿತಾಂಶವು ರಾಜಕೀಯ ಪಾಳಯದಲ್ಲಿ ಅಚ್ಚರಿಗೆ ಕಾರಣವಾಗಿದೆ. ಈ ಹಿನ್ನಲೆ ಬೆಂಗಳೂರಿನ ಬನ್ನೇರುಘಟ್ಟ ಸರ್ಕಲ್​ನಲ್ಲಿ ಚಂಪಕಧಾಮ ದೇವಾಲಯದ ಬಳಿ ಮಂಜುನಾಥ್​ ಬೆಂಬಲಿಗರು ನೂರೊಂದು ತೆಂಗಿನಕಾಯಿ ಒಡೆದು ಹರಕೆ ತೀರಿಸಿ, ದಳ ಮತ್ತು ಬಿಜೆಪಿ ಮುಖಂಡರು ಪಟಾಕಿ ಸಿಡಿಸಿ ಭರ್ಜರಿ ಸಂಭ್ರಮಾಚರಣೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net