

ಮಂಗಳೂರು : ಫ್ರೆಂಡ್‌ಶಿಪ್ ಫೋರಂ ನವದೆಹಲಿ ಇವರು ನೀಡುವ ಪ್ರತಿಷ್ಠಿತ ‘ಗ್ಲೋಬಲ್ ಅಚೀವರ್ಸ್’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಇದರ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಆಯ್ಕೆಗೊಂಡಿದ್ದಾರೆ.
ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಹಕಾರ, ಸಮಾಜಸೇವೆ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ನಾಡಿಗೆ ಸಲ್ಲಿಸಿರುವ ಅನುಪಮ ಸೇವೆಯನ್ನು ಗುರುತಿಸಿ ನವದೆಹಲಿಯ ಫ್ರೆಂಡ್‌ಶಿಪ್ ಫೋರಂ ಆವರನ್ನು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾಗಿ ಸಾರ್ಥಕ , ಪ್ರಾಮಾಣಿಕ ಸೇವೆಯನ್ನು ಕಳೆದ 31 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ
ಗೈಯುತ್ತಿರುವ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಈ ಬ್ಯಾಂಕ್ ಅನ್ನು ಅತ್ಯುನ್ನತ ಮಟ್ಟಕ್ಕೇರಿಸಿದ್ದಾರೆ . ಇವರ ಜನಸ್ಪಂದನೆಯ ಕಾರ್ಯವೈಖರಿಯಿಂದಲೇ ಎಸ್‌ಸಿಡಿಸಿಸಿ ಬ್ಯಾಂಕ್ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತಾಗಿದೆ.
ನವೋದಯ ಸ್ವ ಸಹಾಯ ಸಂಘಗಳ ಹರಿಕಾರರಾಗಿ ಅಪೂರ್ವ ಪರಂಪರೆಯನ್ನು ರೂಪಿಸಿರುವ ರಾಜೇಂದ್ರ ಕುಮಾರ್ ರಾಜ್ಯದ ಧೀಮಂತ ಸಹಕಾರಿ ನಾಯಕರಲ್ಲಿ ಒಬ್ಬರು. ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನವೋದಯ ಸ್ವಸಹಾಯ ಸಂಘಗಳ ಮೂಲಕ ನೀಡಿ , ಆರ್ಥಿಕ ಚೈತನ್ಯವನ್ನು ತುಂಬಿದ್ದಾರೆ. ಇತ್ತೀಚೆಗೆ ನಡೆದ ನವೋದಯ ರಜತ ಸಂಭ್ರಮ ಸಹಕಾರ ಕ್ರೇತ್ರದಲ್ಲೇ ನೂತನ ಮೈಲಿಗಲ್ಲು
ಸ್ಥಾಪಿಸಿದೆ.
ರಾಜೇಂದ್ರ ಕುಮಾರ್ ಅವರು ಸಹಕಾರಿ ಬ್ಯಾಂಕಿಂಗ್ ಹಾಗೂ ಸಾಮಾಜಿಕ ರಂಗದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಹಲವಾರು ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಶ್ರೀಲಂಕಾದ ಕೊಲಂಬೊ ಮುಕ್ತ ವಿಶ್ವವಿದ್ಯಾಲಯ ಹಾಗೂ ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದ ರಾಜ್ಯದ ಮೊದಲ ಸಹಕಾರಿ ನಾಯಕ ಇವರು.
ಕರ್ನಾಟಕ ಸರ್ಕಾರದಿಂದ ಸಹಕಾರ ರತ್ನ ಪ್ರಶಸ್ತಿ , ಸಹಕಾರ ವಿಶ್ವ ಬಂಧುಶ್ರೀ, ಮದರ್ ತೆರೆಸಾ ಸದ್ಭಾವನಾ ಪ್ರಶಸ್ತಿ ,
ಮಹಾತ್ಮಾ ಗಾಂಧಿ ಸಮ್ಮಾನ್ ಪ್ರಶಸ್ತಿ , ಬೆಸ್ಟ್ ಚೇರ್ಮನ್ ನ್ಯಾಷನಲ್ ಅವಾರ್ಡ್, ನ್ಯಾಷನಲ್ ಎಕ್ಸಲೆನ್ಸ್ ಅವಾಡರ್ರ್,
ಔಟ್ ಸ್ಟೆಂಡಿಂಗ್ ಗ್ಲೋಬಲ್ ಲೀಡರ್‌ಶಿಪ್ ಅವಾರ್ಡ್ ಇವರ ಕಾರ್ಯದಕ್ಷತೆಗೆ ಲಭಿಸಿದೆ.