ವೈದ್ಯನ ಮೇಲೆ ಹಲ್ಲೆಗೆ ಡಾ. ಪ್ರದೀಪ್ ಡಿಮೆಲ್ಲೋ ಖಂಡನೆ

dr.pradeep dimello
ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಪ್ರದೀಪ್ ಡಿಮೆಲ್ಲೋ
Published on

ಶಿವಮೊಗ್ಗ: ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಕರ್ತವ್ಯ ನಿರತ ವೈದ್ಯಾಧಿಕಾರಿ ಡಾ. ವೆಂಕಟೇಶ್ ಅವರ ಮೇಲೆ ಹಲ್ಲೆಯನ್ನು ಕೆಪಿಸಿಸಿ ವೈದ್ಯರ ಘಟಕದ ಪ್ರಧಾನ ಕಾರ್ಯದರ್ಶಿ, ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಪ್ರದೀಪ್ ಡಿಮೆಲ್ಲೋ ಖಂಡಿಸಿದ್ದಾರೆ.

ವೈದ್ಯರು ತಮ್ಮ ಪ್ರಾಣದ ಹಂಗು ತೊರೆದು ಜನರ ಜೀವ ಉಳಿಸುತ್ತಿದ್ದಾರೆ. ಕರೊನಾ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೇ ಅನೇಕರ ಪ್ರಾಣ ಕಾಪಾಡಿದ್ದಾರೆ. ಅಂತಹ ವೈದ್ಯರ ಮೇಲೆ ಹಲ್ಲೆ ನಡೆಸಿರುವುದು ಇಡೀ ವೈದ್ಯ ಸಮೂಹಕ್ಕೆ ನೋವುಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸರ್ಕಾರ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಮುಂದೆ ಇಂತಹ ಘಟನೆಗಳು ನಡೆಯದಂತೆ ಕಠಿಣ ಕಾನೂನುಗಳನ್ನು ಜಾರಿಗೊಳಿಸಬೇಕು. ಚಿಕ್ಕಮಗಳೂರಿನಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದವರಿಗೆ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಸಮಾಜಕ್ಕೆ ಸಂದೇಶ ರವಾನಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net