

ಶ್ರೀ ಗಣೇಶ ಮ್ಯೂಸಿಕಲ್ ಗ್ರೂಪ್ಸ್ ವತಿಯಿಂದ ಸಾಹಸಸಿಂಹ ವಿಷ್ಣುವರ್ಧನ್ 74ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿನಯದ ಚಿತ್ರ ಗೀತೆಗಳ ಕರೋಕೆ ಗಾಯನ ಕಾರ್ಯಕ್ರಮವನ್ನು ಸೆ.21ರಂದು ಸಂಜೆ 4 ಗಂಟೆಗೆ ಪುರಭವನದಲ್ಲಿ ಆಯೋಜಿಸಲಾಗಿದೆ.
ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮೇಲುಕೋಟೆ ವಂಗಿಪುರ ಮಠದ ಇಳೈ ಆಳ್ವಾರ್ ಸ್ವಾಮಿ, ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ. ರೇಖಾ ಅರುಣ್, ವೈದ್ಯ ಡಾ. ಮಂಜುನಾಥ್ ಭಾಗವಹಿಸಲಿದ್ದಾರೆ.