ಸರಿಯಾದ ಸಮಯಕ್ಕೆ ಸಾಲ ಕಟ್ಟದಿದ್ದಕ್ಕೆ ಮಹಿಳೆಯ ತಲೆ ಬೋಳಿಸಿ ಹಲ್ಲೆ ; Womens SHG ವಿರುದ್ಧ ಕೇಳಿಬಂತು ಗಂಭೀರ ಆರೋಪ

Assault
Published on

ಅಗರ್ತಲಾ: ಪಡೆದಿದ್ದ ಸಾಲವನ್ನು ಸರಿಯಾದ ಸಮಯಕ್ಕೆ ಮರುಪಾವತಿಸದಿದ್ದಕ್ಕೆ ಸ್ವಸಹಾಯ ಗುಂಪಿನ ಸದಸ್ಯರು (SHG) ಮಹಿಳೆ ಮೇಲೆ ಹಲ್ಲೆ ಮಾಡಿ ಅರ್ಧ ತಲೆ ಬೋಳಿಸಿ ವಿಕೃತಿ ಮೆರೆದಿರುವ ಘಟನೆ ತ್ರಿಪುರಾದ ಸೆಪಹಿಜಾಲಾ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಸಂಬಂಧ ಪೊಲೀಸರು ಸಂತ್ರಸ್ತೆಯನ್ನು ರಕ್ಷಿಸಿದ್ದು, ಆಕೆಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. 

ಘಟನೆ ಕುರಿತಾಗಿ ಮಾತನಾಡಿರುವ ಬಿಶಾಲ್‌ಗಢ ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಶಿಯುಲಿ ದಾಸ್, ಲಾಲಸಿಂಗ್‌ಮುರಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆ ಕೆಲ ತಿಂಗಳ ಹಿಂದೆ ಸ್ವಸಹಾಯ ಮಹಿಳಾ ಗುಂಪೊಂದರಿಂದ (SHG) ಸಾಲವನ್ನು ಪಡೆದಿದ್ದರು. ಸಾಲವನ್ನು ಸರಿಯಾದ ಸಮಯಕ್ಕೆ ಕಟ್ಟಲು ಸಾಧ್ಯವಾಗಿರಲಿಲ್ಲ. ಇದರಿಂದ ಉದ್ರಿಕ್ತಗೊಂಡ ಗುಂಪಿನ ಸದಸ್ಯರು ಸಂತ್ರಸ್ತೆಯ ಮನೆಗೆ ನುಗ್ಹಿ ಆಕೆಯ ಮೇಲೆ ಹಲ್ಲೆ ನಡೆಸಿ ಬಳಿಕ ತಲೆಯನ್ನು ಅರ್ಧ ಬೋಳಿಸಿದ್ದಾರೆ. 

ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಅಧಿಕಾರಿಗಳು ಸಂತ್ರಸ್ತೆಯನ್ನು ರಕ್ಷಿಸಿದ್ದು, ಕೂಡಲೇ ಆಕೆಯನ್ನು ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಸಂತ್ರಸ್ತೆ ಹೇಳಿಕೆಯನ್ನು ಆಧರಿಸಿ ಸ್ವಸಹಾಯ ಮಹಿಳಾ ಗುಂಪಿನ (SHG) ಸದಸ್ಯರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ವಿಭಾಗಗಳ ಅಡಿಯಲ್ಲಿ 20-21 ಅನಾಮಧೇಯ ವ್ಯಕ್ತಿಗಳ ವಿರುದ್ಧ ಪೊಲೀಸರು ಸ್ವಯಂ ಮೋಟೋ ಪ್ರಕರಣವನ್ನು ದಾಖಲಿಸಲಾಗಿದೆ. 

ಹಲ್ಲೆ ಸಂಬಂಧ ಸೆಕ್ಷನ್ 74, ಮಹಿಳೆಯ ನಮ್ರತೆಗೆ ದೌರ್ಜನ್ಯ ಎಸಗಿದ್ದಕ್ಕಾಗಿ ಸೆಕ್ಷನ್ 115(2) ಮತ್ತು ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದಕ್ಕಾಗಿ ಸೆಕ್ಷನ್ 3( 5) ಅಡಿ ಪ್ರಕರಣ ದಾಖಲಾಗಿದೆ. ಹಲ್ಲೆ ಮಾಡಿದ ಆರೋಪಿಗಳು ತಲೆಮಾರಿಸಿಕೊಂಡಿದ್ದು, ಅವರನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಬಿಶಾಲ್‌ಗಢ ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಶಿಯುಲಿ ದಾಸ್ ತಿಳಿಸಿದ್ದಾರೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net