ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರು ಕುಡಿಯುವುದರಿಂದ ಆಗುವ ಲಾಭಗಳೇನು ಗೊತ್ತಾ?

Jeera Water Benefits
Published on

- ಎಲ್ಲಾ ಸಮಸ್ಯೆಗಳಿಗೆ ಇದೊಂದು ಪವಾಡ ಮದ್ದು

ಬೆಂಗಳೂರು: ಅಡುಗೆ ಮನೆಯಲ್ಲಿ ಸಿಗುವ ಸಾಂಬಾರ ಪದಾರ್ಥಗಳಲ್ಲಿ ಜೀರಿಗೆಯೂ ಒಂದು. ಜೀರಿಗೆ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಆದರೆ ಖಾಲಿ ಹೊಟ್ಟೆಯಲ್ಲಿ ಜೀರಿಗೆ ನೀರನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಲಾಭವಿದೆ.

ಜೀರಿಗೆಯಲ್ಲಿರುವ ಆರೋಗ್ಯಕರ ಅಂಶ: ಜೀರಿಗೆಯಲ್ಲಿ ವಿಟಮಿನ್ ಹಾಗೂ ಪ್ರಮುಖ ಪೋಷಕಾಂಶಗಳಿವೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಚಯಾಪಚಯ ದರವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಜೀರಿಗೆ ಕಬ್ಬಿಣ, ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ನಂತಹ ಖನಿಜಗಳನ್ನು ಹೊಂದಿರುತ್ತದೆ.

ಮನೆ ಮದ್ದಾಗಿ ಜೀರಿಗೆ :

1) ಜೀರಿಗೆ ನೀರನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.

2) ಪ್ರತಿದಿನ ಜೀರಿಗೆ ನೀರನ್ನು ಕುಡಿಯುವುದರಿಂದ ಉರಿಯೂತ ಶಮನಕಾರಿ ಗುಣಗಳನ್ನು ಹೊಂದಿದೆ. ಇವು ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

3) ದೇಹವು ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಅಲ್ಲದೆ, ಜೀರಿಗೆ ನೀರು ಜೀರ್ಣಾಂಗ ವ್ಯವಸ್ಥೆಯನ್ನು ನೋಡಿಕೊಳ್ಳುತ್ತದೆ.

4) ಜೀರಿಗೆ ನೀರು ತೂಕ ಇಳಿಸಲು ಸಹಾಯ ಮಾಡುತ್ತದೆ.

5) ಜೀರಿಗೆ ಕಬ್ಬಿಣ, ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ನಂತಹ ಖನಿಜಗಳನ್ನು ಹೊಂದಿರುತ್ತದೆ. ಮೂಳೆಗಳ ಆರೋಗ್ಯವನ್ನು ಸುಧಾರಿಸಲು ಮತ್ತು ನರಗಳ ಕಾರ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಜೀರಿಗೆ ನೀರು ಮಾಡುವ ವಿಧಾನ: ಜೀರಿಗೆ ನೀರನ್ನು ತಯಾರಿಸುವ ವಿಧಾನಮೊದಲು, ಒಂದು ಬೌಲ್ ನೀರಿನಲ್ಲಿ ಒಂದು ಚಮಚ ಜೀರಿಗೆಯನ್ನು ನೆನೆಸಿಡಿ. ಮರುದಿನ ಬೆಳಿಗ್ಗೆ ನೀವು ಈ ನೀರನ್ನು ನೇರವಾಗಿ ಕುಡಿಯಬಹುದು ಅಥವಾ 5-6 ನಿಮಿಷಗಳ ಕಾಲ ಕುದಿಸಿ ಕುಡಿಯಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net