ಗಿರಿಜನ ಹಾಡಿಗಳಿಗೆ ಕುಡಿಯುವ ನೀರು

13 gkp 01
ಪ್ರಧಾನಮಂತ್ರಿ ಜನ್‌ಮನ್ ಯೋಜನೆ ಸಂಬಂಧ ನಿಟ್ಟೂರಿನಲ್ಲಿ ವಿಶೇಷ ಗ್ರಾಮ ಸಭೆ ಆಯೋಜಿಸಲಾಗಿತ್ತು. ಅಮ್ಮಣಿ, ಚಕ್ಕೇರ ಸೂರ್ಯ ಅಯ್ಯಪ್ಪ, ಸುರೇಶ್ ಇದ್ದರು.
Published on

ಗೋಣಿಕೊಪ್ಪ: ಪ್ರಧಾನಮಂತ್ರಿ ಜನಮನ ಯೋಜನೆಯಡಿ ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬಾರಕಟ್ಟೆ, ತಟ್ಟಕೆರೆ, ಪಾಲದಳ ಗಿರಿಜನ ಹಾಡಿಗೆ ಕುಡಿಯುವ ನೀರು ಒದಗಿಸುವ ಸಂಬಂಧ ವಿಶೇಷ ಗ್ರಾಮ ಸಭೆ ಆಯೋಜಿಸಲಾಗಿತ್ತು.

ನಿಟ್ಟೂರಿನಲ್ಲಿ ಮಂಗಳವಾರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಮ್ಮಣಿ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ವಿಶೇಷ ಗ್ರಾಮ ಸಭೆಯಲ್ಲಿ ಯೋಜನೆ ಅನುಷ್ಠಾನಕ್ಕೆ ಒಪ್ಪಿಗೆ ಪಡೆಯಲಾಯಿತು.

ಸುಮಾರು 1.40 ಕೋಟಿ ರೂ. ವೆಚ್ಚದ ಕಾಮಗಾರಿ ಇದಾಗಿದೆ. ಜನವಸತಿ ಪ್ರದೇಶದ ಸ್ವಲ್ಪ ಭಾಗಗಳು ಅರಣ್ಯ ಪ್ರದೇಶದಲ್ಲಿದ್ದು, ಕೇಂದ್ರ ಸರ್ಕಾರ ಮಾರ್ಗಸೂಚಿಯಂತೆ ಈ ಭಾಗಗಳಿಗೂ ನೀರೊದಗಿಸಲು ಸಭೆಯಲ್ಲಿ ಶಿಫಾರಸು ಮಾಡಲಾಯಿತು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚಕ್ಕೇರ ಸೂರ್ಯ ಅಯ್ಯಪ್ಪ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ್, ಸದಸ್ಯರಾದ ಕಾಟಿಮಾಡ ಶರೀನ್ ಮುತ್ತಣ್ಣ, ಪಡಿಞರಂಡ ಕವಿತಾ ಪ್ರಭು, ಜೆ.ಕೆ.ಅಪ್ಪಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net