ಹೊಳೆಬೆಳ್ಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ

1001312675
ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ಗ್ರಾಮಸ್ಥರು ಪರಿತಪಿಸುವಂತಾಗಿದೆ.
Published on

ಆಲೂರು : ತಾಲೂಕಿನ ಹೊಳೆಬೆಳ್ಳೂರು ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ಗ್ರಾಮಸ್ಥರು ಪರಿತಪಿಸುವಂತಾಗಿದೆ.

ತಾಲೂಕಿನ ಹುಣಸುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಳೆಬೆಳ್ಳೂರು ಗ್ರಾಮದಲ್ಲಿ ಸುಮಾರು 200ಕ್ಕೂ ಹೆಚ್ಚು ಮನೆಗಳಿದ್ದು ಒಂದು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮಸ್ಥರು ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಹ್ಯಾಂಡ್‌ಪಂಪ್ ಬಳಕೆ ಮಾಡುತ್ತಿದ್ದು, ಹ್ಯಾಂಡ್‌ಪಂಪ್‌ನಲ್ಲಿ ಕಲುಷಿತ ನೀರು ಬರುತ್ತಿದೆ. ಆದರೆ ಇದೇ ನೀರನ್ನು ಬಳಸಬೇಕಾದ ಅನಿವಾರ್ಯತೆ ಎದುರಾಗಿದೆ. ಮಕ್ಕಳು ಹಾಗೂ ವೃದ್ಧರು ಚಳಿ-ಜ್ವರದಿಂದ ಬಳಲುತ್ತಿದ್ದು, ದಿನನಿತ್ಯ ಆಸ್ಪತ್ರೆ ಅಲೆಯುವಂತಾಗಿದೆ. ಈ ಬಗ್ಗೆ ಹುಣಸವಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಅಶೋಕ್ ಹಾಗೂ ಸಿಬ್ಬಂದಿ ಗಮನಕ್ಕೆ ತಂದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ.

ಖಾಸಗಿ ನೀರಿಗೂ ವಿದ್ಯುತ್ ಸಮಸ್ಯೆ: ಖಾಸಗಿ ಕೊಳವೆ ಬಾವಿಗಳಿಂದ ಕುಡಿಯುವ ನೀರು ಪಡೆಯಲಾಗುತ್ತಿತ್ತು. ಕಳೆದೊಂದು ವಾರದಿಂದ ಸುರಿಯುತ್ತಿರುವ ಮಹಾ ಮಳೆಗೆ ವಿದ್ಯುತ್ ಕಂಬಗಳು ಧರೆಗೆ ಉರುಳಿರುವುದರಿಂದ ವಿದ್ಯುತ್ ಸಮಸ್ಯೆ ಎದುರಾಗಿದ್ದು, ಸರಿಪಡಿಸುವಂತೆ ಸ್ಥಳೀಯ ಜನಪ್ರತಿನಿದಿನಗಳು, ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಸೆಸ್ಕ್ ಅಧಿಕಾರಿಗಳಿಗೆ ಮನವಿ ಮಾಡಿದರೂ ಇದುವರೆಗೂ ಸರಿಪಡಿಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುತ್ತಿಲ್ಲ ಎಂದು ಗ್ರಾಮದ ಮಹಿಳೆಯರು ದೂರಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಧರ್ಮಪ್ಪ, ಲಲಿತಮ್ಮ, ಸವಿತಾ, ಯೋಗೇಶ್, ಮಲ್ಲೇಶ್, ರುದ್ರಮ್ಮ, ಮಮತಾ, ಅಶೋಕ, ಮೈಲಾರಯ್ಯ, ಗಂಗಾಧರ್, ರತ್ನಮ್ಮ, ಸ್ವಾಮಿ ಸೇರಿದಂತೆ ಮುಂತಾದವರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net