ಬಿಎಂಟಿಸಿ ಬಸ್ ಡಿಪೋನಲ್ಲೇ ಚಾಲಕ ಆತ್ಮಹತ್ಯೆ

BMTC Bus
ಸಾಂದರ್ಭಿಕ ಚಿತ್ರ
Published on

ಬೆಂಗಳೂರು : ಬಿಎಂಟಿಸಿ ಬಸ್ ಚಾಲಕ ಕಮ್ ನಿರ್ವಾಹಕ ಡಿಪೋದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ದೇವನಹಳ್ಳಿ ತಾಲೂಕಿನ ಅವತಿ ಗ್ರಾಮದ ನಿವಾಸಿ ನಾಗೇಶ್ (46) ಮೃತ ದುರ್ದೈವಿ. ದೇವನಹಳ್ಳಿ ಬಿಎಂಟಿಸಿ ಡಿಪೋದಲ್ಲಿ ಸೋಮವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಂಗಳವಾರ ಬೆಳಗ್ಗೆ ಕೃತ್ಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವತಿ ಗ್ರಾಮದಲ್ಲಿ ತನ್ನ ಇಬ್ಬರು ಮಕ್ಕಳು, ಪತ್ನಿ ಜತೆ ನೆಲೆಸಿದ್ದ ನಾಗೇಶ್, ಕಳೆದ 15 ವರ್ಷಗಳಿಂದ ಬಿಎಂಟಿಸಿಯಲ್ಲಿ ಚಾಲಕ ಕಮ್ ನಿರ್ವಾಹಕನಾಗಿ ಕೆಲಸ ಮಾಡಿದ್ದ. 1 ತಿಂಗಳು ಸುದೀರ್ಘ ರಜೆ ಪಡೆದಿದ್ದ ನಾಗೇಶ್, ಸೋಮವಾರ ರಾತ್ರಿ ಡಿಪೋಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಪರೀತ ಮದ್ಯ ವ್ಯಸನಿ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net