

Drone attack | ಭಾರತದ 15 ನಗರಗಳನ್ನು ಗುರಿಯಾಗಿಸಿ ದಾಳಿಗೆ ವಿಫಲ ಯತ್ನವನ್ನು ನಡೆಸಿದ ಬೆನ್ನಲ್ಲೇ ಪಾಕಿಸ್ತಾನ ಜಮ್ಮುವಿನ ಮೇಲೆ ಕ್ಷಿಪಣಿಗಳು ಮತ್ತು ಡ್ರೋನ್ಗಳ ಮೂಲಕ ದಾಳಿ ನಡೆಸಿದೆ. 2025 ರ ಮೇ 8 ಮತ್ತು 9 ರ ಮಧ್ಯರಾತ್ರಿ ಅಂತರರಾಷ್ಟ್ರೀಯ ಗಡಿಗಳಲ್ಲಿ ನಡೆದ ಡ್ರೋನ್ ಕಾರ್ಯಾಚರಣೆಯ ಸಂದರ್ಭದಲ್ಲಿ ಭಾರತೀಯ ಸೇನೆಯು ಹಲವಾರು ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದುರುಳಿಸಿತು. ಪಾಕಿಸ್ತಾನ ಸಶಸ್ತ್ರ ಪಡೆಗಳು ಮೇ 08 ಮತ್ತು 09 ರ ಮಧ್ಯರಾತ್ರಿ ಇಡೀ ಪಶ್ಚಿಮ ಗಡಿಯಲ್ಲಿ ಡ್ರೋನ್‌ಗಳು ಮತ್ತು ಇತರ ಯುದ್ಧಸಾಮಗ್ರಿಗಳನ್ನು ಬಳಸಿ ಅನೇಕ ದಾಳಿಗಳನ್ನು ನಡೆಸಿದವು. ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯುದ್ದಕ್ಕೂ ಪಾಕಿಸ್ತಾನ ಪಡೆಗಳು ಹಲವಾರು ಕದನ ವಿರಾಮ ಉಲ್ಲಂಘನೆಗಳನ್ನು ನಡೆಸಿದವು.
ಭಾರತೀಯ ಸೇನೆಯು ಡ್ರೋನ್ ದಾಳಿಗಳನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸುವ ಮೂಲಕ ಕದನ ವಿರಾಮ ಉಲ್ಲಂಘನೆಗಳಿಗೆ ಸೂಕ್ತ ಉತ್ತರ ನೀಡಿತು. ಇನ್ನೂ ಈ ಬಗ್ಗೆ ಸೇನೆಯು ಪ್ರತಿಕ್ರಿಯೆ ನೀಡಿದ್ದು, ಭಾರತೀಯ ಸೇನೆಯು ರಾಷ್ಟ್ರದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಲು ಬದ್ಧವಾಗಿದೆ. ಎಲ್ಲಾ ದುಷ್ಟ ಪ್ರಯತ್ನಗಳಿಗೆ ನಮ್ಮ ಶಕ್ತಿಯಿಂದ ಪ್ರತಿಕ್ರಿಯಿಸಲಾಗುತ್ತದೆ X ನಲ್ಲಿ ಪೋಸ್ಟ್ ಮಾಡಲಾಗಿದೆ.
ಡ್ರೋನ್‌ಗಳನ್ನು ನಾಶಮಾಡಲು ಸೇನೆಯು ಹಲವಾರು ವಾಯು ರಕ್ಷಣಾ ವ್ಯವಸ್ಥೆಗಳು ಮತ್ತು ಶಸ್ತ್ರಾಸ್ತ್ರಗಳನ್ನು ಬಳಸಿತು. ಈ ಕಾರ್ಯಾಚರಣೆಯಲ್ಲಿ ಎಲ್-70 ಬಂದೂಕುಗಳು, ಜು-23ಎಂಎಂ, ಶಿಲ್ಕಾ ವ್ಯವಸ್ಥೆಗಳು ಮತ್ತು ಇತರ ಸುಧಾರಿತ ಕೌಂಟರ್-ಯುಎಎಸ್ ಉಪಕರಣಗಳನ್ನು ಬಳಸಲಾಯ್ತು.
ನಿನ್ನೆ ರಾತ್ರಿ ಪಾಕಿಸ್ತಾನ ನಿಯಂತ್ರಣ ರೇಖೆ (LOC) ಮತ್ತು ಅಂತರರಾಷ್ಟ್ರೀಯ ಗಡಿಗಳಲ್ಲಿ (IB) ವಿವಿಧ ಸ್ಥಳಗಳಿಗೆ ಹಲವು ಡ್ರೋನ್‌ಗಳನ್ನು ಕಳುಹಿಸಲು ವಿಫಲ ಪ್ರಯತ್ನಗಳನ್ನು ಮಾಡಿತು. ಈ ಸಂದರ್ಭದಲ್ಲಿ ಉಧಂಪುರ, ಸಾಂಬಾ, ಜಮ್ಮು, ಅಖ್ನೂರ್, ನಾಗ್ರೋಟಾ ಮತ್ತು ಪಠಾಣ್‌ಕೋಟ್ ಪ್ರದೇಶಗಳಲ್ಲಿ ಭಾರತೀಯ ಸೇನೆಯ ವಾಯು ರಕ್ಷಣಾ ಘಟಕಗಳು ನಡೆಸಿದ ದೊಡ್ಡ ಪ್ರಮಾಣದ ಪ್ರತಿ-ಡ್ರೋನ್ ಕಾರ್ಯಾಚರಣೆಯಲ್ಲಿ 50ಕ್ಕೂ ಹೆಚ್ಚು ಡ್ರೋನ್‌ಗಳನ್ನು ಯಶಸ್ವಿಯಾಗಿ ತಟಸ್ಥಗೊಳಿಸಿದವು ಎಂದು ಹೇಳಲಾಗಿದೆ.
(ಏಜೆನ್ಸೀಸ್)
ಇನ್ನೂ ಈ ಘಟನೆ ಬಗ್ಗೆ ಸ್ಥಳದಲ್ಲಿದ್ದ ಸ್ಥಳೀಯರು ಪ್ರತಿಕ್ರಿಯೆ ನೀಡಿದ್ದಾರೆ. ನಿನ್ನೆ ರಾತ್ರಿ ಡ್ರೋನ್‌ಗಳು ಹಾರಲು ಪ್ರಾರಂಭಿಸಿದವು ಮತ್ತು ಇಡೀ ರಾತ್ರಿ ಗುಂಡು ಹಾರಿಸುತ್ತಲೇ ಇದ್ದವು. ನಮ್ಮ ಪಡೆಗಳು ಪಾಕಿಸ್ತಾನಕ್ಕೆ ಸೂಕ್ತ ಉತ್ತರ ನೀಡುತ್ತಿವೆ. ನಮ್ಮ ಪ್ರಧಾನಿ ಮತ್ತು ನಮ್ಮ ಸೇನೆಯ ಮೇಲೆ ನಮಗೆ ನಂಬಿಕೆ ಇದೆ. ಎಲ್ಲಾ ಡ್ರೋನ್‌ಗಳನ್ನು ನಮ್ಮ ಪಡೆಗಳು ತಟಸ್ಥಗೊಳಿಸಿವೆ. ನಮ್ಮ ದೇಶದ ಬಗ್ಗೆ ನಮಗೆ ಹೆಮ್ಮೆ ಇದೆ. ಗಡಿಯ ಬಳಿ ಉದ್ವಿಗ್ನತೆ ಇದೆ, ಆದರೆ ಉಳಿದ ಸ್ಥಳಗಳು ಸುರಕ್ಷಿತವಾಗಿವೆ ಎಂದರು. ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ನಾವು 3-4 ಡ್ರೋನ್‌ಗಳನ್ನು ನೋಡಿದ್ದೇವೆ. ಪ್ರತೀಕಾರದ ಗುಂಡಿನ ದಾಳಿ ನಡೆಯಿತು, ಅದು ಇಡೀ ರಾತ್ರಿ ಮುಂದುವರೆಯಿತು. ಪಾಕಿಸ್ತಾನ ಮಾಡಿದ್ದು ಸರಿಯಲ್ಲ, ನಮಗೆ ಭಯವಿಲ್ಲ ಆದರೆ ಇಲ್ಲಿಗಳನ್ನು ಮುಚ್ಚಲಾಗಿದೆ ಎಂದು ಹೇಳಿದರು