ಬರದಿಂದ ಆತ್ಮಹತ್ಯೆ: ರೈತರ ಮಕ್ಕಳ ಶೈಕ್ಷಣಿಕ ಶುಲ್ಕ ಪಾವತಿಗೆ ಅರ್ಜಿ ಆಹ್ವಾನ

raita
Published on

ಬೆಂಗಳೂರು: ಬರ ಪರಿಸ್ಥಿತಿಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಮಕ್ಕಳ 2025-26ನೇ ಸಾಲಿನ ಪ್ರವೇಶ ಶುಲ್ಕವನ್ನು ಮರು ಪಾವತಿಸಲು ಸಂಬಂಧಪಟ್ಟ ವಿದ್ಯಾರ್ಥಿಗಳಿಂದ ಕಾಲೇಜು ಶಿಕ್ಷಣ ಇಲಾಖೆಯು ಅರ್ಜಿ ಆಹ್ವಾನಿಸಿದೆ.

ರಾಜ್ಯದಲ್ಲಿನ ರೈತರು ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಆತ್ಮಹತ್ತಯೆ ಮಾಡಿಕೊಂಡ ರೈತರ ಮಕ್ಕಳಿಗೆ ಸ್ನಾತಕೋತ್ತರ ಪದವಿ ಹಂತದವರೆಗೆ ಶಿಕ್ಷಣವನ್ನು ಮುಂದುವರಿಸಲು ಅನುವಾಗುವಂತೆ ಉಚಿತ ಶಿಕ್ಷಣ, ಹಾಸ್ಟೆಲ್ ಸೌಲಭ್ಯ ಅಥವಾ ತತ್ಸಮಾನ ಶಿಕ್ಷಣ ಶುಲ್ಕ ಮತ್ತು ವಸತಿ ವೆಚ್ಚದ ಮರುಪಾವತಿ ಮಾಡಲಾಗುತ್ತಿದೆ. ಬರ ಪರಿಸ್ಥಿತಿಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳು ಪ್ರವೇಶ ಸಂದರ್ಭದಲ್ಲಿ ಪಾವತಿಸಿರುವ ಶುಲ್ಕವನ್ನು ಮರು ಪಾವತಿಸಲು ಅರ್ಜಿ ಆಹ್ವಾನಿಸಲಾಗಿದೆ.

ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಸರ್ಕಾರಿ ಮತ್ತು ಅನುದಾನಿತ/ಅನುದಾನ ರಹಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಶುಲ್ಕ ಪಾವತಿಸಿರುವ ಶುಲ್ಕಗಳ ರಶೀದಿಯ ದೃಢೀಕರಿಸಿದ ಪ್ರತಿಗಳನ್ನು ಹಾಗೂ ಆತ್ಮಹತ್ಯೆ ಮಾಡಿಕೊಂಡ ರೈತರ ವಿವರಗಳ ಪ್ರತಿಯನ್ನು ಸಲ್ಲಿಸಬಹುದು.

ಇಲಾಖೆ ವೆಬ್‌ಸೈಟ್‌ನಿಂದ ಮರುಪಾವತಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಪ್ರಾಂಶುಪಾಲರಿಂದ ದೃಢೀಕರಿಸಿ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net