

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) 23 ಕೋಟಿ ರೂ. ಮೌಲ್ಯದ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ಮೂವರನ್ನು ಬಂಧಿಸಿದ್ದಾರೆ.
ಬ್ಯಾಂಕಾಕ್‌ನಿಂದ ಕೆಐಎಗೆ ಬಂದಿಳಿದ ವಿಮಾನದಲ್ಲಿ ಪ್ರಯಾಣಿಕರು ಮತ್ತು ಅವರ ಲಗೇಜ್‌ಗಳನ್ನು
ಕೆಐಎ ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾಗ ಮೂವರ ಬಳಿ 23 ಕೆಜಿಯ ಹೈಡ್ರೋಪೋನಿಕ್ಸ್, ಮೈರವಾನ್ ಮತ್ತು ಹೂ ಸೇರಿದಂತೆ ವಿವಿಧ ಬಗೆಯ ಗಾಂಜಾ ಪತ್ತೆಯಾಗಿದೆ. ಪ್ರತ್ಯೇಕ ಕವರ್‌ನಲ್ಲಿ ಪ್ಯಾಕಿಂಗ್ ಮಾಡಿಕೊಂಡು ಪೆಡ್ಲರ್‌ಗಳನ್ನು ಲಗೇಜ್‌ನಲ್ಲಿ ಬಚ್ಚಿಟ್ಟುಕೊಂಡು ತಂದಿರುವುದು ಬೆಳಕಿಗೆ ಬಂದಿದೆ.
ಜಪ್ತಿ ಮಾಡಿರುವ ಡ್ರಗ್ಸ್ ಮೌಲ್ಯ 23 ಕೋಟಿ ರೂ. ಎಂದು ಅಂದಾಜು ಮಾಡಲಾಗಿದೆ. ಬಂಧಿತರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತಿದೆ. ಅಲ್ಲಿಂದ ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದರು. ಇದರ ಖರೀದಿದಾರರು ಮತ್ತು ಗ್ರಾಹಕರು ಯಾರೆಂಬುದರ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.