

ತೆಲಂಗಾಣ: ಗಸಗಸೆ ಸ್ಟ್ರಾ( poppy straw) ದಲ್ಲಿ ಡ್ರಗ್ ಸಾಗಿಸಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ರಾಜಸ್ಥಾನದ ಮೂವರು ವ್ಯಕ್ತಿಗಳನ್ನು ಇಲ್ಲಿನ ಹೈದರಾಬಾದ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಸ್ಥಳೀಯ ಮತ್ತು ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಇಲ್ಲಿನ ಮೀರಪೇಟ್ ಪೊಲೀಸ್ ಠಾಣಾ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ ಸುಮಾರು 1.25 ಕೋಟಿ ಮೌಲ್ಯದ 53.5 ಕಿಲೋ ಗ್ರಾಂ ಗಸಗಸೆ ಸ್ಟ್ರಾ ವಶಪಡಿಸಿಕೊಳ್ಳಲಾಗಿದೆ ಎಂದು ರಾಚಕೊಂಡ ಪೊಲೀಸ್ ಕಮಿಷನರ್ ಜಿ.ಸುಧೀರ್ ಬಾಬು ತಿಳಿಸಿದ್ದಾರೆ.
ಆರೋಪಿಗಳಿಂದ ಮೂರು ಮೊಬೈಲ್ ಫೋನ್‌ಗಳು ಮತ್ತು ಇತರ ದೋಷಾರೋಪಣೆ ಸಾಮಗ್ರಿಗಳನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ (NDPS) ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ,(ಏಜೆನ್ಸೀಸ್).