

ಒಡಿಶಾ: ಮಾದಕ ವಸ್ತುಗಳ ಅಕ್ರಮ ಕಳ್ಳಸಾಗಾಣೆಯಲ್ಲಿ ತೊಡಗಿರುವ ಗ್ಯಾಂಗ್ನ್ನು ಭೇದಿಸುವ ಮೂಲಕ ಅವರಿಂದ 60 ಕೆಜಿ ಹಶಿಶ್ ಎಣ್ಣೆಯನ್ನು ಒಡಿಶಾದ ಮಲ್ಕಂಗಿರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ (Seized) ಎಂದು ವರದಿ ಬಂದಿದೆ.
ಸುದ್ಧಿಮೂಲಗಳೊಂದಿಗೆ ಮಾತನಾಡಿದ ಮಲ್ಕಂಗಿರಿ ಪೊಲೀಸ್ ವರಿಷ್ಠಾಧಿಕಾರಿ ವಿನೋದ್ ಪಾಟೀಲ್, ಆರೋಪಿಗಳಿಂದ ಸುಮಾರು 8 ಕೋಟಿ ಬೆಲೆ ಬಾಳುವ 60 ಕೆಜಿ ಹಶಿಶ್ ಎಣ್ಣೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ನು ಘಟನೆ ನಡೆದ ನಂತರ 8 ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಆದಾಗ್ಯೂ, ಪ್ರಕರಣದಲ್ಲಿ ಭಾಗಿಯಾಗಿರುವ 8 ಆರೋಪಿಗಳು ಅಪರಾಧ ಸ್ಥಳದಿಂದ ನಾಪತ್ತೆಯಾಗಿದ್ದಾರೆ. ಸ್ಥಳದಲ್ಲಿಯೇ ಬಿಟ್ಟು ಹೋಗಿದ್ದ ಎಂಟು ಮೋಟಾರ್ ಸೈಕಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಭಾನುವಾರ (ನ.02) ಬೆಳಿಗ್ಗೆ 11 ಗಂಟೆ ಸುಮಾರಿಗೆ ಅನುಮಾನಾಸ್ಪದ ವ್ಯಕ್ತಿಗಳು ಗಾಂಜಾ ಅಥವಾ ಹಶಿಶ್ನ್ನು ಸಾಗಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಗುಪ್ತಚರ ಇಲಾಖೆಗೆ ಮಾಹಿತಿ ತಿಳಿಸಿದ ನಂತರ ಗುಪ್ತ ತಂಡವು ಮಾಹಿತಿಯನ್ನು ಪರಿಶೀಲಿಸಲು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ.
ಪೊಲೀಸ್ ವಾಹನ ಮತ್ತು ಸಮವಸ್ತ್ರದಲ್ಲಿದ್ದ ಸಿಬ್ಬಂದಿಯನ್ನು ನೋಡಿದ 8 ಜನರು ಸ್ಥಳದಿಂದ ತಪ್ಪಿಸಿಕೊಳ್ಳಲು ಯಶಸ್ವಿಯಾದರು. ತಮ್ಮ ಬೈಕ್ಗಳನ್ನು ಮತ್ತು ಅನುಮಾನಾಸ್ಪದ ನಿಷೇಧಿತ ವಸ್ತುಗಳನ್ನು ಹೊಂದಿದ್ದ ಒಂದು ಪ್ಲಾಸ್ಟಿಕ್ ಚೀಲವನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ವೇಳೆ ಗಸ್ತು ತಂಡವು ದುಷ್ಕರ್ಮಿಗಳನ್ನು ಬೆನ್ನಟ್ಟಿ ಅವರನ್ನು ಬಂಧಿಸಲು ಪ್ರಯತ್ನಿಸಿದ್ದರೂ, ಆರೋಪಿಗಳು ದಟ್ಟವಾದ ಕಾಡಿನಲ್ಲಿ ತಪ್ಪಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಹಂಚಿಕೊಂಡ ಮಾಹಿತಿಯ ಪ್ರಕಾರ, ಕರ್ನಾಟಕ, ತೆಲಂಗಾಣ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಕೇರಳದಂತಹ ರಾಜ್ಯಗಳಲ್ಲಿ ಗರಿಷ್ಠ ಸಂಖ್ಯೆಯ ಹ್ಯಾಶಿಶ್ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. (ಏಜೆನ್ಸೀಸ್)