36 ಚಾಲಕರ ವಿರುದ್ಧ ಡ್ರಂಕ್ ಆ್ಯಂಡ್ ಡ್ರೈವ್ ಪ್ರಕರಣ ದಾಖಲು

newborn-shifted-in-zero-traffic
ನವಜಾತ ಶಿಶುವನ್ನು ಜೀರೋ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಸ್ಥಳಾಂತರಿಸಲಾಯಿತು.
Published on

ಬೆಂಗಳೂರು: ಖಾಸಗಿ ಶಾಲಾ ವಾಹನಗಳ ಚಾಲಕರ ವಿರುದ್ಧ ಡ್ರಂಕ್ ಆ್ಯಂಡ್ ಡ್ರೈವ್ ವಿಶೇಷ ಕಾರ್ಯಾಚರಣೆ ನಡೆಸಿರುವ ಸಂಚಾರ ಪೊಲೀಸರು, ಸೋಮವಾರ ಪಾನಮತ್ತ ಚಾಲಕರ ವಿರುದ್ಧ 36 ಪ್ರಕರಣ ದಾಖಲಿಸಿದ್ದಾರೆ.
ಮದ್ಯಪಾನ ಮಾಡಿ ಶಾಲಾ ವಾಹನಗಳನ್ನು ಚಾಲನೆ ಮಾಡುವ ಚಾಲಕರ ವಿರುದ್ಧ ನಗರದ ಸಂಚಾರ ಪೊಲೀಸರು ಸೋಮವಾರ ಬೆಳಗ್ಗೆ ೭ ಗಂಟೆಯಿಂದ ೯.೩೦ರ ವರೆಗೆ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ನಗರದ ಎಲ್ಲಾ ಸಂಚಾರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು ೩,೬೭೬ ಖಾಸಗಿ ಶಾಲಾ ವಾಹನಗಳ ಚಾಲಕ ತಪಾಸಣೆ ಮಾಡಿದ್ದು, ಈ ವೇಳೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ ೨೬ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಜನವರಿ ೨೩ರಂದು ೩,೪೧೪ ಖಾಸಗಿ ಶಾಲಾ ವಾಹನಗಳ ತಪಾಸಣೆ ನಡೆಸಿ ೧೬ ಮಂದಿ ಪಾನಮತ್ತ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಫೆಬ್ರವರಿ ೨೨ರಂದು ೨,೦೫೯ ವಾಹನಗಳ ತಪಾಸಣೆ ನಡೆಸಿ ೦೭ ಹಾಗೂ ಜುಲೈ ೯ರಂದು ೩,೧೬ ವಾಹನಗಳ ತಪಾಸಣೆ ನಡೆಸಿ ೨೩ ಪಾನಮತ್ತ ಚಾಲಕರ ವಿರುದ್ಧ ಡ್ರಂಕ್ ಆ್ಯಂಡ್ ಡ್ರೈವ್ ಪ್ರಕರಣ ದಾಖಲಿಸಿದ್ದರು.
ನಿಯಮ ಉಲ್ಲಂಘನೆ ಬಗ್ಗೆ ಮಾಹಿತಿ ನೀಡಿ:
ವಿದ್ಯಾರ್ಥಿಗಳ ರಸ್ತೆ ಸುರಕ್ಷತೆ ಸಂಚಾರ ಪೊಲೀಸರ ಆದ್ಯತೆಯಾಗಿದೆ. ಹೀಗಾಗಿ ಈ ಡ್ರಂಕ್ ಆ್ಯಂಡ್ ಡ್ರೈವ್ ವಿಶೇಷ ಕಾರ್ಯಾಚರಣೆ ಮುಂದುವರಿಯಲಿದೆ. ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಹಾಗೂ ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಚಾಲಕರು ಸಂಚಾರ ನಿಯಮ ಪಾಲಿಸುತ್ತಿರುವ ಬಗ್ಗೆ ಶಾಲಾ-ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಪಾಲಕರು ಖಾತ್ರಿಪಡಿಸಿಕೊಳ್ಳಬೇಕು. ಸುರಕ್ಷತೆ ನಿಯಮಗಳ ಉಲ್ಲಂಘನೆ ಬಗ್ಗೆ ಮಾಹಿತಿ ಕಂಡು ಬಂದಲ್ಲಿ ಕೂಡಲೇ ಸಂಚಾರ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net