

ಕೊಲ್ಹಾಪುರ: ಕೊಲ್ಹಾಪುರದ ಮಾಂಸ ಮಾರುಕಟ್ಟೆಯಲ್ಲಿ ಮಹಿಳೆ ಸೇರಿದಂತೆ ಸಾರ್ವಜನಿಕರಿಗೆ ತೊಂದರೆ ಮತ್ತು ಹಲ್ಲೆ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕುಡಿದ ಅಮಲಿನಲ್ಲಿ ರಾತ್ರಿ ವೇಳೆ ಸ್ಥಳೀಯರಿಗೆ ತೊಂದರೆ ಕೊಡುತ್ತಿದ್ದ ವ್ಯಕ್ತಿ, ತದನಂತರ ಕಾರಿನೊಳಗೆ ಕುಳಿತ್ತಿದ್ದ ಮಹಿಳೆಗೆ ಕಿರಿಕಿರಿ ಉಂಟು ಮಾಡಿದ್ದಾನೆ. ಕಾರಿನ ಬಾಗಿಲನ್ನು ತೆಗೆಯಲು ಪ್ರಯತ್ನಿಸಿದ್ದಾನೆ. ಬಳಿಕ ಕೈಗೆ ಸಿಕ್ಕ ಕೊಡಲಿಯಿಂದ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಧ್ಯಪ್ರವೇಶಿಸಿ, ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ,(ಏಜೆನ್ಸೀಸ್).