ಕುಡಿದ ಮತ್ತಿನಲ್ಲಿ ಬೀದಿ ನಾಯಿಯ ಮೇಲೆ ಅತ್ಯಾಚಾರ ಎಸಗಿದ ದುರುಳ ಅರೆಸ್ಟ್​

Stray Dog
Published on

ಅಮೃತಸರ: ಆಘಾತಕಾರಿ ಘಟನೆಯೊಂದರಲ್ಲಿ ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಬೀದಿ ನಾಯಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಪಂಜಾಬಿನ ಮೊಗಾ ಜಿಲ್ಲೆಯ ಧರಮ್​ಕೋಟ್​​ ಎಂಬ ಪ್ರದೇಶದಲ್ಲಿ ನಡೆದಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಪ್ರಕರಣ ಸಂಬಂಧ ಪೊಲೀಸರು ಕೃತ್ಯ ಎಸಗಿದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಧರಮ್​ಕೋಟ್​ ಪೊಲೀಸ್​ ಠಾಣಾಧಿಕಾರಿ ಬಲ್ವಿಂದರ್​ ಸಿಂಗ್​ ಬಂಧಿತನನ್ನು ರಾಮ್​ಕುಮಾರ್​ ಎಂದು ಗುರುತಿಸಲಾಗಿದ್ದು, ಇತ್ತೀಚಿಗೆ ಬೀದಿ ನಾಯಿಯೊಂದು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿರುವುದನ್ನು ಗಮನಿಸಿದ ಪ್ರಾಣಿಪ್ರಿಯ ಅಜಯ್​ ಕುಮಾರ್​ ಎಂಬುವವರು ಸಿಸಿಟಿವಿಯನ್ನು ಪರಿಶೀಲಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಅಜಯ್​ಕುಮಾರ್​ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ವಶಕ್ಕೆ ಡೆಯಲಾಗಿದ್ದು, FIR ದಾಖಲಿಸಲಾಗಿದೆ. ವಿಚಾರಣೆ ವೇಳೆ ಆರೋಪಿ ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಬಂಧಿತನ ವಿರುದ್ಧ ಭಾರತ ದಂಡ ಸಂಹಿತೆ(IPC Section) 377 ಹಾಗೂ 11ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಧರಮ್​ಕೋಟ್​ ಪೊಲೀಸ್​ ಠಾಣಾಧಿಕಾರಿ ಬಲ್ವಿಂದರ್​ ಸಿಂಗ್​ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net