ಮದ್ಯದ ಅಮಲಿನಲ್ಲಿ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ಮಹಿಳೆ..! ರಸ್ತೆ ಮಧ್ಯದಲ್ಲೇ ಹೈಡ್ರಾಮಾ

fight
Published on

ವಡೋದರ: ಗುಜರಾತಿನಲ್ಲಿ ಮದ್ಯವನ್ನು ನಿಷೇಧಿಸಿದ ನಂತರವೂ ಅಲ್ಲಿ ಮದ್ಯ ಮಾರಾಟ ಮತ್ತು ಸೇವನೆ ನಡೆಯುತ್ತಿದೆ ಎಂಬುದು ಇದೀಗ ಸೋಶಿಯಲ್​​ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋ ಮೂಲಕ ಕನ್​ಫರ್ಮ್​​ ಆದಂತಿದೆ. ವೈರಲ್ ಆಗಿರುವ ವಿಡಿಯೊದಲ್ಲಿ ಮಹಿಳೆ ರಸ್ತೆಯಲ್ಲಿ ಪೊಲೀಸರನ್ನು ನಿಂದಿಸಿ ಹೊಡೆಯಲು ಯತ್ನಿಸುತ್ತಿರುವುದನ್ನು ಕಾಣಬಹುದು.


ವಡೋದರದಲ್ಲಿ ಈ ರೀತಿ ಮದ್ಯ ಸೇವಿಸಿ ಅನುಚಿತವಾಗಿ ವರ್ತಿಸಿದ ಮಹಿಳೆಯನ್ನು ಬಂಧಿಸಲಾಗಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ, ಬೈದು ಕೂಗಾಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.


ಆರಂಭದಲ್ಲಿ, ಮಹಿಳೆ ತನ್ನ ಕಾರನ್ನು ತಪಾಸಣೆಗಾಗಿ ನಿಲ್ಲಿಸಿದ ಪೊಲೀಸ್ ಅಧಿಕಾರಿಯನ್ನು ಚಿತ್ರೀಕರಿಸಲು ಪ್ರಯತ್ನಿಸಿದಳು. ಆಗ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಯನ್ನು ಚಿತ್ರೀಕರಿಸದಂತೆ ಕೇಳಿಕೊಂಡರು. ಆಕೆ ಇದನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ಪೊಲೀಸ್ ಅಧಿಕಾರಿಯನ್ನು ಚಿತ್ರೀಕರಿಸುವುದನ್ನು ಮುಂದುವರೆಸಿದಳು. ಈ ವೇಳೆ ಪೊಲೀಸ್ ಅಧಿಕಾರಿ ಮಹಿಳೆಯ ಮೊಬೈಲ್ ಫೋನ್ ಕೊಡಲು ಒತ್ತಾಯಿಸಿದಾಗ ಜಗಳ ಶುರುವಾಗಿದೆ.


ಪೊಲೀಸರ ಮೇಲೆ ಹಲ್ಲೆ ನಡೆಸುತ್ತಿದ್ದಾಕೆಯನ್ನ ಮಹಿಳಾ ಪೇದೆಯೊಬ್ಬರು ತಡೆಯೋಕೆ ಮುಂದಾಗಿದ್ದಾರೆ. ಆದರೂ ಆಕೆ ಪೊಲೀಸರ ಮೇಲೆ ದಾಳಿ ಮಾಡಲು ನಿರಂತರವಾಗಿ ಪ್ರಯತ್ನಿಸುತ್ತಿರುತ್ತಾಳೆ. ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಸಿಕ್ಕಿಬಿದ್ದಾಗ ಗಲಾಟೆ ಶುರುವಾಗಿತ್ತು. ಸದ್ಯ ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net