ಕುಡಿದ ಮತ್ತಿನಲ್ಲಿ ಸ್ನೇಹಿತನ ಕೊಲೆ

murder
Published on

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಮದ್ಯದ ಪಾರ್ಟಿ ವೇಳೆ ಇಬ್ಬರು ಸ್ನೇಹಿತರ ನಡುವೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಅಂಜನಾನಗರದ ವಿಶಾಲ್ ಯಾದವ್ (25) ಕೊಲೆಯಾದ ಯುವಕ. ಕೃತ್ಯ ಎಸಗಿದ ಸ್ನೇಹಿತ ಅಭಿಷೇಕ್ ಪರಾರಿಯಾಗಿದ್ದು, ಬಂಧನಕ್ಕೆ ಬಲೆಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರಪ್ರದೇಶ ಮೂಲದ ವಿಶಾಲ್ ಮತ್ತು ಅಭಿಷೇಕ್ ಕೆಲ ತಿಂಗಳಿಂದ ಅಂಜನಾನಗರದಲ್ಲಿ ನೆಲೆಸಿದ್ದರು. ನಿರ್ಮಾಣ ಹಂತದ ಕಟ್ಟಡದಲ್ಲಿ ಇಬ್ಬರು ಪೇಂಟಿಂಗ್ ಕೆಲಸ ಮಾಡುತ್ತಿದ್ದರು.

ಕಟ್ಟಡದ 2ನೇ ಮಹಡಿಯಲ್ಲಿ ಶುಕ್ರವಾರ ರಾತ್ರಿ ಮದ್ಯ ಸೇವಿಸಿದ್ದರು. ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆಗೆ ತಿರುಗಿದೆ. ವಿಕೋಪಕ್ಕೆ ತಿರುಗಿ ಅಭಿಷೇಕ್‌ನನ್ನು ವಿಶಾಲ್ ಯಾದವ್ ಕಟ್ಟಡದಿಂದ ತಳ್ಳಿದ್ದಾನೆ. ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡುವಷ್ಟರಲ್ಲಿ ವಿಶಾಲ್ ಸಾವನ್ನಪ್ಪಿದ್ದನು. ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net