ನ್ಯಾಯಾಂಗ ಬಂಧನಕ್ಕೆ ಡಿ.ಎಸ್. ವೀರಯ್ಯ

veera
Published on

ಬೆಂಗಳೂರು: ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ (ಡಿಡಿಯುಟಿಟಿಎಲ್) ಹಗರಣ ಸಂಬಂಧ ಸಿಐಡಿ ಬಂಧನಕ್ಕೆ ಒಳಗಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಎಸ್. ವೀರಯ್ಯ ಅವರನ್ನು ಜು.30ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶಿಸಿದೆ.

2021ರಿಂದ 2023ರ ಅವಧಿಯಲ್ಲಿ ಡಿಡಿಯುಟಿಟಿಎಲ್ ನಿಗಮದಲ್ಲಿ ಗುತ್ತಿಗೆ ನೀಡಿಕೆಯಲ್ಲಿ ಅಕ್ರಮ ನಡೆದಿದೆ ಎಂದು ವಿಲ್ಸನ್ ಗಾರ್ಡನ್ ಠಾಣೆಗೆ 2023 ಸೆ.23ರಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶಿವಪ್ರಕಾಶ್ ದೂರು ನೀಡಿದ್ದರು. ಇದರ ಮೇರೆಗೆ ದಾಖಲಾದ ಪ್ರಕರಣದ ತನಿಖೆ ಕೈಗೊಂಡ ಸಿಐಡಿ ಅಧಿಕಾರಿಗಳು ಅಂದಿನ ನಿಗಮದ ಅಧ್ಯಕ್ಷರಾಗಿದ್ದ ಡಿ.ಎಸ್. ವೀರಯ್ಯನನ್ನು ಬಂಧಿಸಿ ಕಸ್ಟಡಿಗೆ ಪಡೆದಿದ್ದರು. ಅವಧಿ ಮುಗಿದ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು, ಮಂಗಳವಾರ 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.

ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದ ಅಧ್ಯಕ್ಷರಾಗಿದ್ದ ಡಿ.ಎಸ್. ವೀರಯ್ಯ, 47.10 ಕೋಟಿ ರೂ. ನಡೆದಿದೆ ಎನ್ನಲಾದ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net