ಪ್ರತಿಜ್ಞಾ ವಿಧಿ ಸ್ವೀಕಾರ

26NGD5
Published on

ನಂಜನಗೂಡು: ಸಂವಿಧಾನ ದಿನಾಚರಣೆ ಅಂಗವಾಗಿ ಭಾನುವಾರ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ನಗರದ ಬೈಪಾಸ್ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ನಂತರ ದಸಂಸ ಜಿಲ್ಲಾ ಸಂಚಾಲಕ ಮಲ್ಲಹಳ್ಳಿ ನಾರಾಯಣ ಮಾತನಾಡಿ, ಅಂಬೇಡ್ಕರ್ ಅವರ ದೂರದೃಷ್ಟಿಯಿಂದ ಸಮಗ್ರತೆ, ಸಮಾನತೆಯನ್ನು ಸಾರುವ ಸಂವಿಧಾನವನ್ನು ದೇಶಕ್ಕೆ ಸಮರ್ಪಣೆ ಮಾಡಿದ್ದಾರೆ. ಇಡೀ ವಿಶ್ವವೇ ಮೆಚ್ಚುವ ಸಂವಿಧಾನ ನಮ್ಮದಾಗಿದೆ. ಅಂತಹ ಸಂವಿಧಾನವನ್ನು ದುರ್ಬಲಗೊಳಿಸುವ ಒಳ ಷಡ್ಯಂತ್ರಗಳು ಈಗ ನಡೆಯುತ್ತಿದೆ ಎಂದು ವಿಷಾದಿಸಿದರು.
ದೆಹಲಿಯ ಜಂತರ್ ಮಂತರ್‌ನಲ್ಲಿ ಸಂವಿಧಾನ ಪ್ರತಿಗಳನ್ನು ಸುಟ್ಟು ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ಉಂಟು ಮಾಡಿದ ಕಿಡಿಗೇಡಿಗಳ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ಕ್ರಮ ಜರುಗಿಸದೇ ಇರುವುದು ಪರೋಕ್ಷವಾಗಿ ಅವರ ನಡೆಯನ್ನು ಬೆಂಬಲಿಸಿದೆ ಎಂದು ಆಪಾದಿಸಿದರು. ದೇಶದ ಅಖಂಡತೆ ಹಾಗೂ ಸಾರ್ವಭೌಮತ್ವವನ್ನು ಸಾರುವ ಸಂವಿಧಾನವನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಸಂಕಲ್ಪ ಮಾಡಬೇಕಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net