ಪ್ರಜ್ಞಾವಂತರಾಗಲು ಶಿಕ್ಷಣ ಅವಶ್ಯ

2
Published on

ಮೈಸೂರು: ಸಮಾಜದಲ್ಲಿ ಉತ್ತಮ ಸ್ಥಾನಕ್ಕೇರಲು, ಸುರಕ್ಷಿತ ಜೀವನ ನಡೆಸಲು ಹಾಗೂ ಪ್ರಜ್ಞಾವಂತ ಪ್ರಜೆಯಾಗಲು ಶಿಕ್ಷಣ ಅವಶ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರವೀಂದ್ರ ಹೆಗಡೆ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರದಲ್ಲಿ ವಿಶ್ವೇಶ್ವರನಗರದ ಬಿಲ್ಡರ್ಸ್ ಅಸೋಸಿಯೇಷನ್‌ನಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮೂಲಭೂತ ಹಕ್ಕು ಆದ ಶಿಕ್ಷಣವು ಪ್ರತಿಯೊಬ್ಬರಿಗೂ ದೊರೆಯಬೇಕು. ಬಾಲಕಾರ್ಮಿಕ ಮಕ್ಕಳಿಗೆ ಶಿಕ್ಷಣದ ಅರಿವನ್ನು ಮೂಡಿಸಿ ಅವರನ್ನು ಶಾಲೆಗೆ ಹೋಗುವಂತೆ ಪ್ರೇರೇಪಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net