ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಸಾವಿಗೀಡಾದ ಬಾಲಕ!; ಶವ ಮಾಜಿ ಸಿಎಂ ಮುಂದಿಟ್ಟು ನ್ಯಾಯ ಕೊಡಿಸುವಂತೆ ಮನವಿ..

Boy
Published on

ತುಮಕೂರು: ಆಸ್ಪತ್ರೆಯೊಂದರಲ್ಲಿ ವೈದ್ಯರಿಲ್ಲದೆ ಬಾಲಕ ಸಾವಿಗೀಡಾಗಿದ್ದು, ಶವವನ್ನು ಕುಟುಂಬಸ್ಥರು ಮಾಜಿ ಮುಖ್ಯಮಂತ್ರಿಯವರ ಮುಂದಿಟ್ಟು ನ್ಯಾಯ ಕೊಡಿಸುವಂತೆ ಮನವಿ ಮಾಡಿಕೊಂಡ ಪ್ರಕರಣ ನಡೆದಿದೆ. ತುಮಕೂರು ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.

ಮಧುಗಿರಿ ತಾಲೂಕಿನ ಕೊಡಿಗೆನಹಳ್ಳಿಯಲ್ಲಿ ಈ ಪ್ರಕರಣ ನಡೆದಿದೆ. ಕೊಡಿಗೆನಹಳ್ಳಿ ನಿವಾಸಿ ಚೌಕತ್ ಎಂಬವರ ಪುತ್ರ ಸಾದೀಕ್ ಸಾವಿಗೀಡಾದ ಬಾಲಕ. ಬೆಳಗ್ಗೆ ಶಾಲೆಗೆ ಹೋಗಿದ್ದ ಈತ ಮನೆಗೆ ಬಂದಾಗ ನೀರಿನ ಸಂಪ್​ಗೆ ಬಿದ್ದು ಅಸ್ವಸ್ಥನಾಗಿದ್ದ. ಕೂಡಲೇ ಈತನನ್ನು ಕೊಡಿಗೆನಹಳ್ಳಿ ಆಸ್ಪತ್ರೆಗೆ ಕುಟುಂಬಸ್ಥರು ಕರೆತಂದಿದ್ದರು.

ಆದರೆ ಆಸ್ಪತ್ರೆಯಲ್ಲಿ ಆ ಸಮಯದಲ್ಲಿ ವೈದ್ಯರಿಲ್ಲದೆ ಚಿಕಿತ್ಸೆ ಸಿಗದ್ದರಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೆ ಪಂಚರತ್ನ ಯಾತ್ರೆಯಲ್ಲಿದ್ದ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರ ಬಳಿಕ ಬಾಲಕನ ಶವ ತಂದಿರಿಸಿ, ನ್ಯಾಯ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಕುಮಾರಸ್ವಾಮಿ, ಸ್ಥಳದಲ್ಲೇ ಸಿಎಂ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್​ಗೆ ಕರೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಡಿಎಚ್​ಒ ವಿರುದ್ಧ ಕ್ರಮಕೈಗೊಳ್ಳುವಂತೆ ಹೇಳಿದ್ದಲ್ಲದೆ, ವೈದ್ಯರ ವಿರುದ್ಧ ಕೊಡಿಗೆನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವಂತೆ ಕುಟುಂಬಸ್ಥರಿಗೆ ಸೂಚನೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net