

ಮಹಾರಾಷ್ಟ್ರ: ಬಾಯ್ಲರ್ ಸ್ಪೋಟಗೊಂಡ ಹಿನ್ನಲೆ ರೆಸ್ಟೋರೆಂಟ್ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳವಾರ ರಾತ್ರಿ ಮಹಾರಾಷ್ಟ್ರದ ಭಿವಂಡಿಯಲ್ಲಿ ವರದಿಯಾಗಿದೆ.
ರೆಸ್ಟೋರೆಂಟ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಬಾಯ್ಲರ್ ಸ್ಫೋಟದಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿ ಉಲ್ಲೇಖಿಸಿದೆ,(ಏಜೆನ್ಸೀಸ್).