ಭಾರೀ ಮಳೆಗೆ ಕೊಚ್ಚಿಹೋದ 100ಕ್ಕೂ ಹೆಚ್ಚು ಗ್ಯಾಸ್​​ ಸಿಲಿಂಡರ್‌ಗಳು; ವಿಡಿಯೋ ವೈರಲ್​

Untitled design - 2023-07-24T154832.169
Published on

ಗುಜರಾತ್​: ಗುಜರಾತಿನ ನವಸಾರಿಯಲ್ಲಿ ಸುರಿದ ಭಾರೀ ಮಳೆಯಿಂದ ಪ್ರವಾಹದಂತಹ ಪರಿಸ್ಥಿತಿ ಎದುರಾಗಿದ್ದು, ಈ ವೇಳೆ 100ಕ್ಕೂ ಹೆಚ್ಚು ಸಿಲಿಂಡರ್‌ಗಳು ನೀರಿನಲ್ಲಿ ಕೊಚ್ಚಿ ಹೋಗಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಈಗಾಗಲೇ ಹಲವು ರಾಜ್ಯಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಗೆ ತತ್ತರಿಸಿರುವ ಗುಜರಾತ್‌ನಲ್ಲಿ ಮುಂದಿನ 24 ಗಂಟೆಗಳ ಕಾಲ ಅಧಿಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಇಂದಿನ ವರದಿಯಲ್ಲಿ ಉಲ್ಲೇಖಿಸಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net