ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆಗಳಿಂದ. ರೈತರನ್ನು ನಾಶ ಮಾಡಲು ಹೊರಟಿದೆ: ಕುರುಬೂರು ಶಾಂತಕುಮಾರ್ ಆರೋಪ.

Kuruburu Shanthakumar
Published on

ಬೆಂಗಳೂರು: ಕೇಂದ್ರ ಸರ್ಕಾರಕ್ಕೆ ದುರ್ಬಲ ಅಧಿಕಾರ ಸಿಕ್ಕಿದ್ದರು ರೈತ ವಿರೋಧಿ ಧೋರಣೆಗಳನ್ನೇ ಮುಂದುವರಿಸುತ್ತಿದೆ. ಇದನ್ನೆ ಮುಂದುವರೆಸಿದರೆ ಅಧಿಕಾರದಿಂದಲೇ ದೂರ ಹಾಕುವ ಸನ್ನಿವೇಶ ನಿರ್ಮಾಣ ಮಾಡಬೇಕಾಗುತ್ತದೆ ಎಂದು ಕುರುಬುರು ಶಾಂತಕುಮಾರ್ ತಿಳಿಸಿದ್ದಾರೆ.

ಪಾಂಡಿಚೇರಿ ಕಾರಯ್ಕಲ್ ನಲ್ಲಿ ನಡೆದೆ ಸಮಾವೇಶದಲ್ಲಿ ಮಾತನಾಡಿದ ಅವರು ರೈತರ ಕೃಷಿ ಭೂಮಿ. ಸಾಲ ವಸುಲಾತಿ ನೆಪದಲ್ಲಿ ಭೂಮಿ ಕಿತ್ತುಕೊಳ್ಳುವ ಸರ್ಪ್ರೈಸಿ ಕಾಯ್ದೆ ಜಾರಿಗೆ ತಂದು. ಸಾಲ ಕಟ್ಟದ ರೈತರ ಜಮೀನುಗಳನ್ನು ಬ್ಯಾಂಕುಗಳು ವಶ ಪಡಿಸಿಕೊಳ್ಳುತ್ತಿವೆ ಇಂತಹ ರೈತ ದ್ರೋಹಿ ಕಾನೂನುಗಳ ವಿರುದ್ಧ ಪ್ರಬಲ ಹೋರಾಟ ನಡೆಸಬೇಕಾಗಿದೆ. ಇಲ್ಲದಿದ್ದರೆ ರೈತ ಕುಲವೇ ನಾಶವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಡಾ. ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿ. ಬೆಳೆ ವಿಮೆ ಪದ್ಧತಿ ತಿದ್ದುಪಡಿ ಆಗಬೇಕು. 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿಗೆ ತರಬೇಕು ಎಂಬ ಇನ್ನಿತರ ಒತ್ತಾಯಗಳ ಬಗ್ಗೆ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಮುಂದಿನ ದಿನಗಳಲ್ಲಿ ಪ್ರಬಲಗೊಳಿಸಲು ಪಾಂಡಿಚೇರಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ದಕ್ಷಿಣ ಭಾರತ ರಾಜ್ಯದ ರೈತ ಮುಖಂಡರು ತೀರ್ಮಾನಿಸಿದರು.

ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುತ್ತಿದ್ದ ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯೇತರ ಸಂಘಟನೆಯ ಮುಖಂಡ ಜಗಜಿತ್ ಸಿಂಗ್ ದಲೈವಾಲಾ. ಮತ್ತಿತರ ಮುಖಂಡರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆದು. ಸಿಖ್ ಧರ್ಮದ ಲಾಂಛನವನ್ನು ಬಳಸದೆ ವಿಮಾನ ಪ್ರವೇಶಿಸಬೇಕೆಂಬ ಖ್ಯಾತೆ ತೆಗೆದ ಪೊಲೀಸರು. ನಂತರ ಕಾಯ್ದಿರಿಸಿರುವ ವಿಮಾನ ಟಿಕೆಟ್ ರದ್ದುಗೊಳಿಸಿದೆ. ಕೇಂದ್ರ ಸರ್ಕಾರ ವಾಮ ಮಾರ್ಗದ ಮೂಲಕ ಚಳುವಳಿಯನ್ನು ಹತ್ತಿಕುವ ಪ್ರಯತ್ನ ನಡೆಸುತ್ತಿದೆ. ಅಲ್ಲದೆ, ದಕ್ಷಿಣ ಭಾರತದಲ್ಲಿ ರೈತ ಚಳುವಳಿಯ ಪ್ರಾಬಲ್ಯವನ್ನು ತಡೆಯಲು ಯತ್ನಿಸುತ್ತಿದ್ದು, ಕೇಂದ್ರ ಸರ್ಕಾರ ರೈತರಿಗೆ ಅವಮಾನ ಮಾಡುತ್ತಿದೆ ಎಂದು ಆರೋಪಿಸಿದರು.

ಸಮಾವೇಶದಲ್ಲಿ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಜಾರಿ,ರೈತರ ಸಂಪೂರ್ಣ ಸಾಲಮನ್ನಾ ಸೇರಿ ಹಲವು ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಇದೇ ವೇಳೆ

ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೇತರ) ಸಂಘಟನೆಯ ಪಾಂಡಿಚೇರಿ ರಾಜ್ಯದ ಮುಖ್ಯಸ್ಥರಾಗಿ ರಾಜೇಂದ್ರನ್ ಅವರನ್ನು ಆಯ್ಕೆ ಮಾಡಲಾಯಿತು. ಮುಖಂಡರುಗಳಾದ ಪಿ ಆರ್ ಪಾಂಡ್ಯನ್, ಲಕ್ವೀಂನ್ದರ್ ಸಿಂಗ್, ಕೇರಳದ ಕೆ ವಿ.ಬಿಜು. ತೆಲಂಗಾಣದ ವೆಂಕಟೇಶ್ವರರಾವ್, ತಮಿಳುನಾಡು,ಕರ್ನಾಟಕ,ಆಂಧ್ರಪ್ರದೇಶ್ ,ತೆಲಂಗಾಣ. ಕೇರಳ. ರಾಜ್ಯಗಳ ರೈತ ಮುಖಂಡರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net