ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ

duniya vija nagaratna
Published on

 ಬೆಂಗಳೂರು: 2018ರಲ್ಲಿ ವಿಚ್ಚೇದನ ಕೊರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ದುನಿಯಾ ವಿಜಯ್‌ ಕೇಸ್‌ ವಜಾ ಮಾಡಿದ ಕೋರ್ಟ್‌.

ನಾಗರತ್ನ ಮತ್ತು ದುನಿಯಾ ವಿಜಯ್ ಅವರ ಸಂಸಾರದಲ್ಲಿ ಹಲವು ವರ್ಷಗಳ ಹಿಂದೆಯೇ ಬಿರುಕು ಮೂಡಿತ್ತು. ಆದ್ದರಿಂದ 2018ರಲ್ಲಿ ವಿಜಯ್ ಅವರು ಡಿವೋರ್ಸ್​ ಸಲುವಾಗಿ ಅರ್ಜಿ ಸಲ್ಲಿಸಿದ್ದರು. ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಅವರು ಸಿದ್ಧರಿದ್ದಾರೆ. ಅಲ್ಲದೇ, ಪತ್ನಿಗೆ ಜೀವನಾಂಶ ನೀಡಲು ಕೂಡ ಅವರು ಒಪ್ಪಿದ್ದಾರೆ. ಆದರೆ, ಪ್ರತಿ ಬಾರಿ ಕೋರ್ಟ್​ನಲ್ಲಿ ವಿಚಾರಣೆ ನಡೆದಾಗ ನಾಗರತ್ನ ಅವರು ಪತಿಯನ್ನು ಬಿಡಲು ಒಪ್ಪಿಕೊಳ್ಳಲಿಲ್ಲ. ಆದ್ದರಿಂದ ಪ್ರಕರಣ ಈತನ ಮುಂದೂಡಿಕೊಂಡು ಬಂದಿತ್ತು.

ನಟ ದುನಿಯಾ ವಿಜಯ್​ ಅವರು ಪತ್ನಿ ನಾಗರತ್ನ ಅವರಿಂದ ವಿಚ್ಛೇದನ ಬೇಕು ಎಂದು ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಬೆಂಗಳೂರಿನ ಶಾಂತಿನಗರದ ಫ್ಯಾಮಿಲಿ ಕೋರ್ಟ್​ನಲ್ಲಿ ದುನಿಯಾ ವಿಜಯ್​ ಅವರು ಅರ್ಜಿ ಸಲ್ಲಿಸಿದ್ದರು. ಪತ್ನಿ ನಾಗರತ್ನ ಮೇಲಿನ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ದುನಿಯಾ ವಿಜಿ  ಅವರ ಅರ್ಜಿಯನ್ನು ವಜಾಗೊಳಿಸಿ ಫ್ಯಾಮಿಲಿ ಕೋರ್ಟ್ ಆದೇಶ ಹೊರಡಿಸಿದೆ.

ಇಂದು (ಜೂನ್​ 13) ದುನಿಯಾ ವಿಜಯ್​ ಮತ್ತು ನಾಗರತ್ನ ಅವರು ವಿಚ್ಛೇನದ ಅಂತಿಮ ತೀರ್ಪು ಹೊರಬರಲಿದೆ ಎಂಬ ಕಾರಣಕ್ಕೆ ಎಲ್ಲರಲ್ಲೂ ಕುತೂಹಲ ಮೂಡಿತ್ತು. ಕೌಟುಂಬಿಕ ನ್ಯಾಯಾಲಯವು ವಿಜಯ್​ಗೆ ವಿಚ್ಛೇನದ ನೀಡಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net