

ಜಮ್ಮು ಕಾಶ್ಮೀರ: ಗುರುವಾರ (ನ.02) ಸೆಲ್ಫ್ ಡಿಫೆನ್ಸ್ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಯೊಬ್ಬ ಪೆಪ್ಪರ್ ಸ್ಪ್ರೇ ಸಿಂಪಡಿಸಿದ ಕಾರಣ 13 ವಿದ್ಯಾರ್ಥಿನಿಯರು ಪ್ರಜ್ಞಾಹೀನರಾದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ವರದಿಯಾಗಿದೆ.
ಮೂರ್ಛೆ ಹೋದ 13 ವಿದ್ಯಾರ್ಥಿನಿಯರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೆಲ್ಫ್ ಡಿಫೆನ್ಸ್ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬ ಪೆಪ್ಪರ್ ಸ್ಪ್ರೇ ಸಿಂಪಡಿಸಿದ್ದಾನೆ. ಇದರಿಂದ ವಿದ್ಯಾರ್ಥಿನಿಯರು ಪ್ರಜ್ಞಾಹೀನ ಸ್ಥಿತಿಗೆ ತಲುಪಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಕಾಶ್ಮೀರ ಜಿಲ್ಲೆಯ ಹಂದ್ವಾರಾ ಪ್ರದೇಶದ ಸರ್ಕಾರಿ ಬಾಲಕಿಯರ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಹಗಲಿನಲ್ಲಿ ಸೆಲ್ಫ್ ಡಿಫೆನ್ಸ್ ಕಾರ್ಯಕ್ರಮವನ್ನು ನಡೆಸಲಾಗಿತ್ತು. ಘಟನೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಹಾಯಕ ಆಸ್ಪತ್ರೆಯ ಉಪ ಅಧೀಕ್ಷಕ ಜಿಎಂಸಿ ಹಂದ್ವಾರ, ಡಾ. ಐಜಾಜ್ ಅಹ್ಮದ್, "13 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕರೆತರಲಾಗಿದೆ. ಚಿಕಿತ್ಸೆ ಬಳಿಕ ಅವರ ಆರೋಗ್ಯ ಸ್ಥಿರವಾಗಿದೆ" ಎಂದರು,(ಏಜೆನ್ಸೀಸ್).