ವರ್ಷದಲ್ಲಿ ರಾಮ ಮಂದಿರ ಪೂರ್ಣ: ಪೇಜಾವರ ಶ್ರೀ

pejavara sri
ಶಿವಮೊಗ್ಗದ ಕೆ.ಎಸ್.ಈಶ್ವರಪ್ಪ ನಿವಾಸಕ್ಕೆ ಸೋಮವಾರ ಆಗಮಿಸಿದ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳಿಗೆ ತುಳಸಿ ಮಾಲೆ ಹಾಕಿ ಸ್ವಾಗತಿಸಲಾಯಿತು. ಕೆ.ಎಸ್.ಈಶ್ವರಪ್ಪ, ಕೆ.ಇ.ಕಾಂತೇಶ್ ಮುಂತಾದವರಿದ್ದರು.
Published on

ಶಿವಮೊಗ್ಗ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಬಾಕಿ ಕಾಮಗಾರಿ ಭರದಿಂದ ಸಾಗುತ್ತಿದೆ. ಇನ್ನೊಂದು ವರ್ಷದಲ್ಲಿ ಮಂದಿರದ ಕಾರ್ಯ ಸಂಪೂರ್ಣವಾಗಲಿದೆ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳು ತಿಳಿಸಿದರು.

ಉಡುಪಿಯಿಂದ ಹೊಸಪೇಟೆಗೆ ತೆರಳುವ ಮಾರ್ಗಮಧ್ಯೆ ಸೋಮವಾರ ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ನಿವಾಸಕ್ಕೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.
ಇತ್ತೀಚೆಗೆ ಅಯೋಧ್ಯೆಗೆ ಭೇಟಿ ನೀಡಿದ್ದೇವೆ. ಅಲ್ಲಿ ಭಕ್ತರು ರಾಮತಾರಕ ಹೋಮ ಮಾಡುತ್ತಿದ್ದಾರೆ. ರಾಮರಾಜ್ಯದ ಸ್ಥಾಪನೆಗಾಗಿ ನಮಗೆ ರಾಮ ಮಂದಿರ ಬೇಕಿದೆ. ಇವತ್ತು ನಮ್ಮಲ್ಲಿರುವುದು ಪ್ರಜಾರಾಜ್ಯ. ಪ್ರತಿಯೊಬ್ಬರೂ ರಾಮನ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಇದು ರಾಮ ರಾಜ್ಯವಾಗಬೇಕು ಎಂದು ಹೇಳಿದರು.
ಈಶ್ವರಪ್ಪ ನಿವಾಸಕ್ಕೆ ಭೇಟಿ ನೀಡಿರುವುದರಲ್ಲಿ ವಿಶೇಷತೆ ಏನಿಲ್ಲ. ಈ ಮಾರ್ಗದಲ್ಲಿ ತೆರಳುತ್ತಿದ್ದರಿಂದ ಭೇಟಿ ನೀಡಿದೆ ಎಂದು ಶ್ರೀಗಳು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net