ಹಂಪಿ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಡಿ.ವಿ.ಪರಮಶಿವಮೂರ್ತಿ ನೇಮಕ

WhatsApp Image 2023-03-23 at 9.09.00 PM
Published on

ಬೆಂಗಳೂರು: ಹಂಪಿ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಡಿ.ವಿ.ಪರಮಶಿವಮೂರ್ತಿಯವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರ್​​ಚಂದ್​​ ಗೆಹ್ಲೋತ್​​​​ ಆದೇಶ ಹೊರಡಿಸಿದ್ದಾರೆ.

ಪರಮಶಿವಮೂರ್ತಿ ಅವರು ಹಾಲಿ ತುಮಕೂರು ವಿಶ್ವವಿದ್ಯಾಲಯದಲ್ಲಿ ಡಾ.ಡಿ.ವಿ.ಗುಂಡಪ್ಪ ಅಧ್ಯಯನ ಕೇಂದ್ರದ ಪ್ರೊಫೆಸರ್​ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಈ ಹಿಂದೆ ಹಂಪಿ ವಿವಿಗೆ ಸ.ಚಿ. ರಮೇಶ್, ಡಾ. ವಿಜಯ್ ಪೂಣಚ್ಚ ತಂಬಂಡ ಅವರನ್ನು ಕುಲಪತಿಗಳನ್ನಾಗಿ ನೇಮಕ ಮಾಡಿದ್ದ ರಾಜ್ಯಪಾಲರು. ವಿಜಯ್​ ತಂಬಂಡ ಅವರ ಅವಧಿ ಮುಗಿದ ಕಾರಣ ಪ್ರೊ.ಪರಮಶಿವಮೂರ್ತಿ ಅವರನ್ನು ನೂತನ ಕುಲಪತಿಗಳನ್ನಾಗಿ ನೇಮಕ ಮಾಡಲಾಗಿದೆ.

ಮೂರು ವರ್ಷಗಳ ಅವಧಿಗೆ ಅನ್ವಯವಾಗುವಂತೆ ಪ್ರೊ. ಪರಮಶಿಮೂರ್ತಿ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net