

ಬೆಂಗಳೂರು:
ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರ ಮನೆಗೆ ಭೇಟಿ ನೀಡಿದ್ದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣಗೌಡ ಅವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಮತ್ತೆ ಸ್ಪರ್ಧೆ ಮಾಡುವಂತೆ ಒತ್ತಾಯಿಸಿದೆ.
ಇತ್ತೀಚೆಗೆ ಡಿ.ವಿ.ಸದಾನಂದ ಗೌಡ ಅವರು ಬಹಿರಂಗವಾಗಿಯೇ ಚುನಾವಣಾ ರಾಜಕಾರಣದಿಂದ ನಿವೃತ್ತಿ ೋಷಿಸಿದ್ದರು.
ಬಿಜೆಪಿ ಮುಖಂಡರು ಅವರ ಮನೆಗೆ ಭೇಟಿ ನೀಡಿ ಮನವೊಲಿಕೆ ಮಾಡಿರುವುದರಿಂದ ಸದಾನಂದಗೌಡರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೊ? ಕಾದು ನೋಡಬೇಕು.