

ಬೆಂಗಳೂರು: ನಿಷೇಧಿತ ಇ- ಸಿಗರೇಟ್ ಮಾರಾಟ ಮಾಡ್ತಿದ್ದ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ಮಂಗಳವಾರ ತಡರಾತ್ರಿ ದಾಳಿ ನಡೆಸಿ 50 ಲಕ್ಷಕ್ಕೂ ಮೌಲ್ಯದ ಇ-ಸಿಗರೇಟ್ ವಶಕ್ಕೆ ಪಡೆದುಕೊಂಡಿದ್ದಾರೆ.
ಕೋರಮಂಗಲ, ಬಾಣಸವಾಡಿ, ಪುಲಕೇಶಿನಗರ ಠಾಣಾ ವ್ಯಾಪ್ತಿಯಲ್ಲಿನ ಅಂಗಡಿಗಳಲ್ಲಿ ಇ-ಸಿಗರೇಟ್ ಮಾರಟ ಮಾಡಲಾಗುತ್ತಿತ್ತು. 2019ರಲ್ಲಿ ಕೇಂದ್ರ ಸರ್ಕಾರ ಇ-ಸಿಗರೇಟ್ ಬ್ಯಾನ್ ಮಾಡಿದ್ದರೂ ಅಕ್ರಮವಾಗಿ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳವು ದಾಳಿ ಮಾಡಿದ್ದು, ಕೇರಳ ಮೂಲದ ಕೆಲವರನ್ನ ವಶಕ್ಕೆ ಪಡೆದಿದೆ. ಕೇರಳ ಮೂಲದ ಆರೋಪಿಗಳು ವಿದೇಶದಿಂದ ಇ-ಸಿಗರೇಟ್ ಅನ್ನು ಆಮದು ಮಾಡಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದರು. ಪುಲಕೇಶಿ ನಗರ, ಬಾಣಸವಾಡಿ, ಕೋರಮಂಗಲ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.