ಕಾಂಕ್ರಿಟ್ ರಸ್ತೆ ಮೇಲೆ ಬಿದ್ದ ವೃದ್ಧ ಚಿಕಿತ್ಸೆಗೆ ಸ್ಪಂದಿಸದೆ ಸಾವು

Crime Logo
Published on

ಶಿಗ್ಗಾಂವಿ: ಕಾಂಕ್ರಿಟ್ ರಸ್ತೆ ಮೇಲೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವೃದ್ಧನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಚಿಕ್ಕಬೆಂಡಿಗೇರಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಪಾಂಡಪ್ಪ ಫಕ್ಕೀರಪ್ಪ ಹೊಸಮನಿ (77) ಮೃತ ವೃದ್ಧ.
ಈತ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಕಾಂಕ್ರಿಟ್ ರಸ್ತೆ ಮೇಲೆ ಬಿದ್ದಿದ್ದಾನೆ. ಇದರಿಂದಾಗಿ ತಲೆಗೆ ಪೆಟ್ಟು ಬಿದ್ದಿದ್ದು, ಕೂಡಲೇ ಆತನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net