

Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ ಶನಿವಾರ ಬೆಳ್ಳಂ ಬೆಳಗ್ಗೆ ಭೂಕಂಪನವಾಗಿದೆ ಎಂದು ವರದಿಯಾಗಿದೆ.
ಜಮ್ಮು ಮತ್ತು ಕಾಶ್ಮೀರದ ಜೊತೆಗೆ, ಹಿಮಾಚಲ ಪ್ರದೇಶದ ಧರ್ಮಶಾಲಾ ನಗರದಲ್ಲಿಯೂ ಭೂಕಂಪನದ ಅನುಭವವಾಗಿದೆ. ಈ ಭೂಕಂಪ 33 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 76.14 ಡಿಗ್ರಿ ಪೂರ್ವ ರೇಖಾಂಶದಲ್ಲಿ ಸಂಭವಿಸಿದೆ ಎಂದು ವರದಿ ಉಲ್ಲೇಖಿಸಿದೆ.
ಮಾಹಿತಿಯ ಪ್ರಕಾರ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.1 ರಷ್ಟಿದೆ.ಈ ಭೂಕಂಪದಿಂದಾಗಿ ಇದುವರೆಗೆ ಯಾವುದೇ ಜೀವ ಅಥವಾ ಆಸ್ತಿಪಾಸ್ತಿ ನಷ್ಟದ ಸುದ್ದಿ ಬಂದಿಲ್ಲ. ಭೂಕಂಪದ ಕೇಂದ್ರಬಿಂದು ಭೂಮಿಯಿಂದ 5 ಕಿಲೋಮೀಟರ್ ಆಳದಲ್ಲಿ ದಾಖಲಾಗಿದೆ.(ಏಜೆನ್ಸೀಸ್)