ತೈವಾನ್​ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ

Earthquake
Published on

ನವದೆಹಲಿ: ಭಾನುವಾರ ತೈವಾನ್​ನಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ. ಭಾನುವಾರ ಬೆಳಗಿನ ಜಾವ ಭೂಕಂಪ ಸಂಭವಿಸಿದೆ ಎಂದು ಜರ್ಮನ್ ರಿಸರ್ಚ್​ ಸೆಂಟರ್​ ಫಾರ್ ಜಿಯೋಸೈನ್ಸ್ ಮಾಹಿತಿ ನೀಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ರಕ್ಷಣಾ ಇಲಾಖೆಯ ಅಧಿಕಾರಿಯೊಬ್ಬರು, ಭೂಕಂಪ 10 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇಲ್ಲಿಯವರೆಗೆ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. 

ಭದ್ರತಾ ದೃಷ್ಟಿಯಿಂದ ಹಳೆಯ ಕಟ್ಟಡಗಳಿಂದ ದೂರ ಇರಲು ತಿಳಿಸಲಾಗಿದೆ. ಜನರು ಮನೆಗಳಿಂದ ಹೊರ ಬಂದು ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ. ರಾಜಧಾನಿ ತೈಪೆಯಲ್ಲಿ ಭೂಕಂಪನದ ಅನುಭವವಾಗಿಲ್ಲ ಎಂದು ರಕ್ಷಣಾ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net