ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಭೂಕಂಪ: 20 ಜನರ ಸಾವು, 300 ಮಂದಿಗೆ ಗಾಯ

earthquake
Published on

ಜರ್ಕಾತಾ: ಇಂಡೋನೇಷ್ಯಾದ ಪ್ರಮುಖ ದ್ವೀಪ ಜಾವಾದಲ್ಲಿ ಇಂದು(ಸೋಮವಾರ) ಭೂಕಂಪ ಸಂಭವಿಸಿದ್ದು, ಸುಮಾರು 20 ಜನರು ಮೃತಪಟ್ಟಿದ್ದಾರೆ. ಕನಿಷ್ಠ 300 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರಾಂತ್ಯದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ವರದಿ ಹೇಳಿದೆ. ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲೂ ಭೂಮಿ ಕಂಪಿಸಿದ ಅನುಭವ ಆಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಭೂಕಂಪನದಿಂದ ಜಾವಾದಲ್ಲಿ ನೂರಾರು ಮನೆಗಳು-ಕಟ್ಟಡಗಳು ಬಿದ್ದಿದ್ದು, ಅವಶೇಷಗಳಡಿ ಸಿಲುಕಿರುವ ಜನರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net