ಜಮ್ಮು-ಕಾಶ್ಮೀರದಲ್ಲಿ ಪ್ರಬಲ ಭೂಕಂಪ, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲು

jk
Published on

ಜಮ್ಮು-ಕಾಶ್ಮೀರ: ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಲೇಹ್ ನ ಉತ್ತರ ಭಾಗದಲ್ಲಿ ಭೂಕಂಪನದ ಅನುಭವವಾಗಿದೆ. ರಾಷ್ಟ್ರೀಯ ಭೂಮಾಪನ ಕೇಂದ್ರದ ಪ್ರಕಾರ, ಬೆಳಗ್ಗೆ 7:29 ರ ಸುಮಾರಿಗೆ ಈ ಭಾಗದಲ್ಲಿ ಭೂಕಂಪನವಾಗಿದೆ ಎಂದು ತಿಳಿದು ಬಂದಿದೆ.

ಜಮ್ಮು ಮತ್ತು ಕಾಶ್ಮೀರದ ಅಲ್ಚಿ (ಲೇಹ್) ನ ಉತ್ತರ ಭಾಗದಲ್ಲಿ ಕೆಲವೇ ಸೆಕೆಂಡುಗಳ ಕಾಲ ಭೂಕಂಪನದ ಅನುಭವವಾಗಿದ್ದು, ಜನರು ತಕ್ಷಣ ಮನೆಯಿಂದ ಹೊರಗೆ ಬಂದಿದ್ದಾರೆ. ಆದರೆ, ಭೂಕಂಪದಿಂದಾಗಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ-ಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3 ದಾಖಲಾಗಿದೆ ಎಂದು ರಾಷ್ಟ್ರೀಯ ಭೂಮಾಪನ ಕೇಂದ್ರ ವರದಿ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net