

Baba Vanga Prediction : ಬಲ್ಗೇರಿಯನ್ನ ನಿಗೂಢ ಮಹಿಳೆ ಬಾಬಾ ವಂಗಾ ಅವರು 2025ನೇ ವರ್ಷದಲ್ಲಿ ಘಟಿಸುವ ಘಟನೆಗಳು ಕುರಿತು ಮೊದಲೇ ನುಡಿದ್ದ ಭವಿಷ್ಯವಾಣಿಯಲ್ಲಿ ಒಂದು ಭವಿಷ್ಯ ನಿಜವಾಗಿದೆ. 2025ನೇ ವರ್ಷ ಆರಂಭವಾದ ಮೂರೇ ತಿಂಗಳಲ್ಲಿ ಒಂದು ಭವಿಷ್ಯವಾಣಿ ನಿಜವಾಗಿದ್ದು, ಇನ್ನುಳಿದ ಭವಿಷ್ಯವಾಣಿಗಳ ಬಗ್ಗೆ ಚರ್ಚೆ ಶುರುವಾಗಿದೆ.
ಬಲ್ಗೇರಿಯನ್ನ ನಿಗೂಢ ಮಹಿಳೆ, ಅತೀಂದ್ರಿಯ ಭವಿಷ್ಯಗಾರ್ತಿ ಎಂದೇ ಖ್ಯಾತಿ ಪಡೆದಿರುವ ಬಾಬಾ ವಂಗಾ ಅವರ ಭವಿಷ್ಯವಾಣಿ ಇದಾಗಲೇ ಜಗದ್ವಿಖ್ಯಾತಿ ಪಡೆದಿದೆ. ವರದಿಗಳ ಪ್ರಕಾರ, ಅವರು 1911ರಲ್ಲಿ ಉತ್ತರ ಮ್ಯಾಸಿಡೋನಿಯಾದ ಸ್ಟ್ರುಮಿಕಾದಲ್ಲಿ ಜನಿಸಿದರು. ಅವರ ಮೂಲ ಹೆಸರು ವಾಂಜೆಲಿಯಾ ಪಾಂಡೆವಾ ಡಿಮಿಟ್ರೋವಾ ಎಂದು. ತಮ್ಮ 12ನೇ ವಯಸ್ಸಿನಲ್ಲಿ ಭಾರೀ ಚಂಡಮಾರುತದ ಸಮಯದಲ್ಲಿ ನಿಗೂಢವಾಗಿ ದೃಷ್ಟಿ ಕಳೆದುಕೊಂಡರಂತೆ. 1996ರಲ್ಲಿ ಮೃತಪಟ್ಟಿರುವ ಬಾಬಾ ವಂಗಾ 5079ನೇ ಇಸವಿಯವರೆಗೂ ಏನೇನಾಗಲಿದೆ ಎನ್ನುವುದನ್ನು ಕಂಡು ಕೊಂಡಿದ್ದಾಗಿ ಹೇಳಿದ್ದು, ಅದನ್ನು ಸಮಾಜಕ್ಕೆ ತಿಳಿಸಿಯೇ ಕೊನೆಯುಸಿರೆಳೆದಿದ್ದರು ಎಂದು ಹೇಳಲಾಗಿದೆ.
ಉಗ್ರರು ಅಮೆರಿಕದ ಮೇಲೆ ನಡೆಸಿದ ದಾಳಿ (9/11), ಚೆರ್ನೋಬಿಲ್ ದುರಂತ, ಪ್ರಿನ್ಸೆಸ್ ಡಯಾನಾ ಸಾವು, 2004ರ ಥಾಯ್ಲೆಂಡ್ ಸುನಾಮಿ, ಬರಾಕ್ ಒಬಾಮಾ ಅಧ್ಯಕ್ಷ ಪಟ್ಟಕ್ಕೇರುವುದು…ಇಂಥ ನೂರಾರು ಘಟನೆಗಳ ಕುರಿತು ಹಲವು ದಶಕಗಳ ಮುಂಚೆಯೇ ನುಡಿದಿದ್ದರು ಇವರು. ಅಷ್ಟೇ ಏಕೆ ಮಹಾಮಾರಿ ಕರೊನಾ ವೈರಸ್ ಕುರಿತು ಅವರು ಮಾಹಿತಿ ನೀಡಿದ್ದರು ಎನ್ನಲಾಗಿದೆ. 15ನೇ ಶತಮಾನದ ಜ್ಯೋತಿಷಿ ನಾಸ್ಟ್ರಾಡಮಸ್‌ಗೆ ಬಾಬಾ ವಂಗಾ ಅವರನ್ನು ಹೋಲಿಕೆ ಮಾಡಲಾಗುತ್ತದೆ. ಅವರ ಭವಿಷ್ಯವಾಣಿಗಳು ಶೇಕಡ 85ರಷ್ಟು ನಿಖರ ಎನ್ನಲಾಗುತ್ತಿದೆ.
ಬಾಬಾ ವಂಗಾ ಭವಿಷ್ಯವಾಣಿ ಪ್ರಕಾರ ಮುಂಬರುವ ವರ್ಷದಲ್ಲಿ ಅಂದರೆ, 2025ರಲ್ಲಿ ಯುರೋಪಿನಲ್ಲಿ ಭಾರಿ ಯುದ್ಧದ ಮುನ್ಸೂಚನೆ ನೀಡಿದ್ದಾರೆ. ಈ ಯುದ್ಧದಿಂದ ವ್ಯಾಪಕ ವಿನಾಶ ಮತ್ತು ಗಮನಾರ್ಹ ಜನಸಂಖ್ಯೆಯಷ ನಷ್ಟಕ್ಕೆ ಕಾರಣವಾಗುತ್ತದೆಯಂತೆ. ಈ ಯುದ್ಧವು ಯುರೋಪ್ ಖಂಡವನ್ನೇ ಧ್ವಂಸಗೊಳಿಸುತ್ತದೆಯಂತೆ. 2025ರಲ್ಲಿ ನಡೆಯುವ ಘಟನೆಗಳು ಜಾಗತಿಕ ವಿನಾಶದ ಆರಂಭಕ್ಕೆ ಕಾರಣವಾಗಿ, 5079ಕ್ಕೆ ವಿಶ್ವವೇ ಅಂತ್ಯವಾಗಲಿದೆ. ಅಂದರೆ, 2025ರಿಂದ ಜಗತ್ತಿನ ವಿನಾಶ ಆರಂಭವಾಗಲಿದೆ ಎಂದು ಬಾಂಬಾ ವಂಗಾ ಭಯಾನಕ ಭವಿಷ್ಯ ನುಡಿದಿದ್ದಾರೆ.
ಇನ್ನು 2025ರಲ್ಲಿ ಸೈಬರ್ ದಾಳಿಯ ಮುನ್ಸೂಚನೆ ನೀಡಲಾಗಿದೆ. ನೀರು, ಶಕ್ತಿ ಮತ್ತು ಸಂವಹನ ವ್ಯವಸ್ಥೆಗಳನ್ನು ಒಳಗೊಂಡಂತೆ ಅಗತ್ಯ ಜಾಗತಿಕ ಮೂಲಸೌಕರ್ಯವನ್ನು ಗುರಿಯಾಗಿಟ್ಟುಕೊಂಡು ಸಂಘಟಿತ ಸೈಬರ್ ದಾಳಿ ನಡೆಯಲಿದೆ ಎಂದು ಬಾಬಾ ವಂಗಾ ಭವಿಷ್ಯ ನುಡಿದಿದ್ದಾರೆ. ಪ್ರಸ್ತುತ ಜಾಗತಿಕವಾಗಿ ಹೆಚ್ಚುತ್ತಿರುವ ಸೈಬರ್ ದೋಷಗಳಿಂದ ಭವಿಷ್ಯದಲ್ಲಿ ಸೈಬರ್ ವಾರ್‌ಫೇರ್ ಮತ್ತು ಡಿಜಿಟಲ್ ಮೂಲಸೌಕರ್ಯದ ದುರ್ಬಲತೆಯ ಬಗ್ಗೆ ಕಳವಳ ವ್ಯಕ್ತವಾಗಿದೆ. ಇನ್ನು ಹವಾಮಾನ ಬದಲಾವಣೆಗಳಿಗೆ ಸಂಬಂಧಿಸಿದ ಪರಿಸರ ವಿಪತ್ತುಗಳು ಕೂಡ ಬಾಬಾ ವಂಗಾರ 2025ರ ಮುನ್ಸೂಚನೆಯ ಭಾಗವಾಗಿದೆ. ಭೂಮಿಯ ಕಕ್ಷೆಯಲ್ಲಿನ ಬದಲಾವಣೆಗಳಿಂದ ಪ್ರಾಕೃತಿಕ ವಿಕೋಪಗಳು ಸಂಭವಿಸಲಿದ್ದು, ವಿನಾಶಕಾರಿ ಬರಗಳು, ಕಾಡ್ಗಿಚ್ಚುಗಳು ಮತ್ತು ಬಿರುಗಾಳಿಗಳಿಗೆ ಕಾರಣವಾಗುತ್ತದೆ ಎಂದು ವಂಗಾ ಹೇಳಿದ್ದಾರೆ. ಇದೆಲ್ಲದರ ನಡುವೆ ಪಾಸಿಟಿವ್ ಅಂಶವೇನೆಂದೆರೆ, 2025ರಲ್ಲಿ ವೈದ್ಯಕೀಯ ಪ್ರಗತಿಯನ್ನು ಬಾಬಾ ವಂಗಾ ಊಹಿಸಿದ್ದಾರೆ. ನಿರ್ದಿಷ್ಟವಾಗಿ ಲ್ಯಾಬ್ನಲ್ಲಿ ಬೆಳೆದ ಮಾನವ ಅಂಗಗಳಿಂದ ಜೀವಿತಾವಧಿಯನ್ನು ತೀವ್ರವಾಗಿ ಸುಧಾರಿಸಬಹುದು ಎಂದು ಬಾಬಾ ವಂಗಾ ಹೇಳಿದ್ದಾರೆ.
ಪ್ರಾಕೃತಿಕ ವಿಕೋಪಗಳು ಸಂಭವಿಸಲಿವೆ ಎಂದು ಬಾಬಾ ವಂಗಾ ಭವಿಷ್ಯ ನುಡಿದಿದ್ದರು. ಕೆಲ ದಿನಗಳ ಹಿಂದಷ್ಟೇ ಮಯನ್ಮಾರ್ ಮತ್ತು ಥಾಯ್ಲೆಂಡ್ನಲ್ಲಿ ಭೀಕರ ಭೂಕಂಪ ಸಂಭವಿಸಿದ್ದು ಗೊತ್ತೇ ಇದೆ. ಈ ಭೂಕಂಪಕ್ಕೆ ಇಡೀ ಜಗತ್ತೇ ಬೆಚ್ಚಿಬಿದ್ದಿದೆ. ಸುಮಾರು 2000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಬಾಬಾ ವಂಗಾ ಅವರ ಭವಿಷ್ಯವಾಣಿಗಳು ಭಾರಿ ಚರ್ಚೆಯಾಗುತ್ತಿದೆ. 2025ರಲ್ಲಿ ಇನ್ನು ಯಾವ ಅವಗಢಗಳು ಸಂಭವಿಸಲಿವೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.
ಇಡೀ ಜಗತ್ತಿನ ನೂರಾರು ವರ್ಷಗಳ ಹಾಗುಹೋಗುಗಳ ಬಗೆಗೆ ಭವಿಷ್ಯ ನುಡಿದಿರುವ ಬಾಗಾ ವಂಗಾ ಪ್ರಕಾರ, 5079ಕ್ಕೆ ಜಗತ್ತು ಕೊನೆಯಾಗುತ್ತದೆ. 2028ರಲ್ಲಿ ಮಾನವರು ಶುಕ್ರವನ್ನು ಭೇಟಿ ಮಾಡುತ್ತಾರೆ, 2033ರಲ್ಲಿ ಧ್ರುವೀಯ ಮಂಜುಗಡ್ಡೆಗಳು ಕರಗಿ, ಜಾಗತಿಕವಾಗಿ ಸಮುದ್ರ ಮಟ್ಟವು ವೇಗವಾಗಿ ಏರುತ್ತೆ, ಮುಸ್ಲಿಮರು 2043 ರಲ್ಲಿ ಯುರೋಪ್ ಅನ್ನು ಆಳುತ್ತಾರೆ, 2076ರಲ್ಲಿ ಕಮ್ಯುನಿಸಂ ಪ್ರಪಂಚದಾದ್ಯಂತ ಹರಡುತ್ತದೆ, 2130ರಲ್ಲಿ ಮಾನವರು ಅನ್ಯಗ್ರಹ ಜೀವಿಗಳೊಂದಿಗೆ ಸಂಪರ್ಕ ಹೊಂದುತ್ತಾರೆ, 2170ರಲ್ಲಿ ಭೂಮಿಯ ಬಹುತೇಕ ಭಾಗಗಳಲ್ಲಿ ಬರ ಉಂಟಾಗುತ್ತದೆ, 3005ರಲ್ಲಿ ಭೂಮಿಯು ಮಂಗಳದ ನಾಗರಿಕತೆಯೊಂದಿಗೆ ಯುದ್ಧದಲ್ಲಿ ತೊಡಗುತ್ತದೆ, 3797ರಲ್ಲಿ ವಾಸಯೋಗ್ಯವಲ್ಲದ ಕಾರಣ ಮಾನವರು ಭೂಮಿಯಿಂದ ಸ್ಥಳಾಂತರವಾಗುತ್ತಾರೆ ಮತ್ತು 5079 ರಲ್ಲಿ ಬ್ರಹ್ಮಾಂಡವು ಕೊನೆಗೊಳ್ಳುತ್ತದೆ ಎಂದು ಬಾಂಬಾ ವಂಗಾರ ಭವಿಷ್ಯದ ಭವಿಷ್ಯವಾಣಿಗಳಾಗಿವೆ. (ಏಜೆನ್ಸೀಸ್)