

ಬೆಂಗಳೂರು: ಪಪ್ಪಾಯಿ ಹಣ್ಣಿನಲ್ಲಿ ಪೋಷಕಾಂಶಗಳು ( Papaya Benefit ) ಹೇರಳವಾಗಿವೆ. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಒಂದು ಕಪ್ ಪಪ್ಪಾಯಿ ಚೂರುಗಳನ್ನು ತಿನ್ನುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ.
ಪಪ್ಪಾಯಿಯಲ್ಲಿ ವಿಟಮಿನ್ ಗಳು : ( Papaya Benefit )
ಮಿನರಲ್ , ಪೊಟ್ಯಾಶಿಯಂ, ವಿಟಮಿನ್ ಗಳು, ಫೈಬರ್ ಮತ್ತು ಫೋಲೇಟ್ ಗಳು ಸಮೃದ್ಧವಾಗಿವೆ.
1) ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಹಣ್ಣನ್ನು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಯು ಬಲಗೊಳ್ಳುತ್ತದೆ ಮತ್ತು ಹೊಟ್ಟೆಯ ಸಮಸ್ಯೆಗಳನ್ನು ತಡೆಯುತ್ತದೆ.
2) ಸತ್ತ ಜೀವಕೋಶಗಳನ್ನು ತೆಗೆದುಹಾಕುತ್ತದೆ.. ತೇವಾಂಶವನ್ನು ಇಡುತ್ತದೆ. ರಂಧ್ರಗಳನ್ನು ಸ್ವಚ್ಛಗೊಳಿಸುತ್ತದೆ.. ಮತ್ತು ತ್ವಚೆಯ ಮೇಲಿನ ಸುಕ್ಕುಗಳನ್ನು ತಡೆಯುತ್ತದೆ. ಜೊತೆಗೆ.. ತ್ವಚೆಯ ನಯವೂ ಹೆಚ್ಚುತ್ತದೆ..
3) ಖಾಲಿ ಹೊಟ್ಟೆಯಲ್ಲಿ ಈ ಹಣ್ಣನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಮತ್ತು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ. ಮಧುಮೇಹಿಗಳು ಈ ಹಣ್ಣನ್ನು ತಮ್ಮ ಆಹಾರದಲ್ಲಿ ಸೇರಿಸುವುದು ತುಂಬಾ ಒಳ್ಳೆಯದು.
4) ಪಪ್ಪಾಯಿ ತಿನ್ನುವುದು ಕೊಲೆಸ್ಟ್ರಾಲ್ ಮಟ್ಟವನ್ನು ಸಾಮಾನ್ಯಗೊಳಿಸುತ್ತದೆ. ಪಪ್ಪಾಯಿ ನಿಮ್ಮ ಹೃದಯಕ್ಕೆ ರಕ್ತದ ಹರಿವನ್ನು ಸುಧಾರಿಸುತ್ತದೆ.
5) ಪಪ್ಪಾಯಿ ತಿನ್ನುವುದರಿಂದ ದೇಹಕ್ಕೆ ಶಕ್ತಿ ಸಿಗುತ್ತದೆ ಮತ್ತು ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡುತ್ತದೆ . ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿಯನ್ನು ತಿನ್ನುವುದರಿಂದ ಅಜೀರ್ಣ ಮತ್ತು ಅಸಿಡಿಟಿ ಸಮಸ್ಯೆಗಳು ಬಹಳ ಮಟ್ಟಿಗೆ ಕಡಿಮೆಯಾಗುತ್ತವೆ.