ಧರ್ಮಸ್ಥಳ ಯೋಜನೆಯಿಂದ ಆರ್ಥಿಕ ಅಭಿವೃದ್ಧಿ

23ತ್ಯಾಗರ್ತಿ
ತ್ಯಾಗರ್ತಿಯಲ್ಲಿ ಧರ್ಮಸ್ಥಳ ಯೋಜನೆಯಿಂದ ಆಯೋಜಿಸಿದ್ದ ಹೊಲಿಗೆ ತರಬೇತಿ ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಶಾಂತಾ ನಾಯ್ಕ ಮಾತನಾಡಿದರು. ಇಸಾಕ್, ನಟರಾಜ್, ಉಷಾ, ಪಾರ್ವತಿ ಇತರರಿದ್ದರು.
Published on

ತ್ಯಾಗರ್ತಿ: ಗ್ರಾಮೀಣ ಭಾಗದ ಬಡಕುಟುಂಬಗಳ ಆರ್ಥಿಕ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ ಎಂದು ತಾಲೂಕು ಯೋಜನಾಧಿಕಾರಿ ಶಾಂತಾ ನಾಯ್ಕ ಹೇಳಿದರು.

ಮಹಿಳಾ ಜ್ಞಾನವಿಕಾಸ ಕೇಂದ್ರದ ಸಹಯೋಗದಲ್ಲಿ ಏರ್ಪಡಿಸಿದ್ದ ಹೊಲಿಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರೂ ಮೂಲ ವೃತ್ತಿಯನ್ನು ಮುಂದಿನ ಪೀಳಿಗೆಗೆ ಕಲಿಸಬೇಕು. ಪಾಲಕರು ಮಕ್ಕಳ ಮೇಲೆ ಯಾವುದೇ ಒತ್ತಡ ಹಾಕಬಾರದು. ವೃತ್ತಿಯನ್ನು ಅವರೇ ಆಯ್ಕೆ ಮಾಡಿಕೊಂಡರೆ ಯಶಸ್ಸು ಗಳಿಸುತ್ತಾರೆ. ಹೊಲಿಗೆ ತರಬೇತಿ ಪಡೆದ ಅನೇಕ ಮಹಿಳೆಯರು ಯೋಜನೆ ಸಹಾಯದಿಂದ ಆಧುನಿಕ ವಿನ್ಯಾಸ ಕಲಿತು ಉತ್ತಮ ಆದಾಯ ಗಳಿಸುತ್ತಿದ್ದಾರೆ ಎಂದು ತಿಳಿಸಿದರು.

ಗ್ರಾಪಂ ಸದಸ್ಯರಾದ ಇಸಾಕ್, ಉಷಾ ರಾಘವೇಂದ್ರ, ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ನಟರಾಜ್, ತರಬೇತಿ ಶಿಕ್ಷಕಿ ಪಾರ್ವತಿ, ಜ್ಞಾನವಿಕಾಸ ಕೇಂದ್ರದ ಸಮನ್ವಯ ಅಧಿಕಾರಿ ಗೌರಮ್ಮ, ಸೇವಾ ಪ್ರತಿನಿಧಿಗಳಾದ ಜಗದೀಶ್, ಭಾರತಿ, ಸ್ನೇಹಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net