ಬಿಲ್ಡರ್‌ಗಳ ಮೇಲೆ ಇಡಿ ದಾಳಿ

IT Raid
Published on

ಬೆಂಗಳೂರು: ಅಕ್ರಮ ಹಣಕಾಸು ವಹಿವಾಟು ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಪ್ರತಿಷ್ಠಿತ ಬಿಲ್ಡರ್‌ಗಳ ಮೇಲೆ ದಾಳಿ ನಡೆಸಿ ದಾಖಲೆ ಪತ್ರಗಳನ್ನು ಜಾಲಾಡಿದ್ದಾರೆ.

ಸೋಮವಾರ ಬೆಳ್ಳಂಬೆಳಗ್ಗೆ ಬಿಲ್ಡರ್‌ಗಳ ಮನೆ, ಕಚೇರಿಗಳನ್ನು ಹೊಂದಿರುವ ಯುಬಿ ಸಿಟಿಯ ಕಿಂಗ್ ಫಿಶರ್ ಟವರ್, ಮಲ್ಲೇಶ್ವರ, ಬಸವೇಶ್ವರನಗರ, ಬನ್ನೇರುಘಟ್ಟ ರಸ್ತೆ, ಹನುಮಂತನಗರ ಮತ್ತು ಮೈಸೂರಿನ ಎರಡು ಸ್ಥಳಗಳು ಸೇರಿದಂತೆ 11 ಸ್ಥಳಗಳಲ್ಲಿ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಸೈಟ್‌ಗಳನ್ನು ಕೊಡಿಸುವುದಾಗಿ ಮತ್ತು ವಿಲ್ಲಾಗಳ ಮಾರಾಟ ವಹಿವಾಟು ವೇಳೆ ವಂಚನೆ, ಅಕ್ರಮ ವ್ಯವಹಾರ, ಆದಾಯ, ಆಸ್ತಿ ತೆರಿಗೆ ಪಾವತಿ ಮಾಡದೆ ಇರುವ ಬಗ್ಗೆ ಹಲವು ದೂರುಗಳು ಬಂದಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿದ ಇಡಿ ಅಧಿಕಾರಿಗಳು, ಪ್ರತ್ಯೇಕ ತಂಡಗಳಾಗಿದಾಳಿ ನಡೆಸಿ ದಾಖಲೆ ಪತ್ರಗಳನ್ನು ಜಪ್ತಿ ಮಾಡಿದ್ದಾರೆ. ಅಲ್ಲದೆ, ಹಾರ್ಡ್ ಡಿಸ್ಕ್, ಬ್ಯಾಂಕ್ ಖಾತೆಗಳ ವಿವರ ಮತ್ತು ನಗದು ಜಪ್ತಿ ಮಾಡಿದ್ದಾರೆ ಎಂದು ಇಡಿ ಮೂಲಗಳು ಮಾಹಿತಿ ನೀಡಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net