ಅಕ್ರಮ ಹಣ ವರ್ಗಾವಣೆ; ಎಎಪಿ ಶಾಸಕ ಅಮಾನತುಲ್ಲಾ ಖಾನ್ ಮನೆ ಮೇಲೆ ED ದಾಳಿ

Amanullah Khan
Published on

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಆಮ್​ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್​ ಅವರ ಮನೆ ಮೇಲೆ ದಾಳಿ ಮಾಡಿದೆ.

2020-21ರ ಅವಧಿಯಲ್ಲಿ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಓಕ್ಲಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಅಮಾನತುಲ್ಲಾ ಖಾನ್ ಅವರ ಮನೆ ಹಾಗೂ ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ.

ದೆಹಲಿ ವಕ್ಫ್ ಬೋರ್ಡ್​ ನೇಮಕಾತಿ ಹಾಗೂ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಶಾಸಕ ಅಮಾನತುಲ್ಲಾ ಖಾನ್​ ಅವರ ಮನೆ ಮೇಲೆ ದಾಳಿ ಮಾಡಲಾಗಿದೆ. ದೆಹಲಿ ವಕ್ಫ್ ಬೋರ್ಡ್​ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ CBI FIR ದಾಖಲಿಸಿವೆ.

ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕರಾದ ಸಂಜಯ್​ ಮಿಶ್ರಾ ಹಾಗೂ ಮನೀಶ್​ ಸಿಸೋಡಿಯಾ ಈಗಾಗಲೇ ತನಿಖಾ ಸಂಸ್ಥೆಯಲ್ಲಿನ ವಶದಲ್ಲಿದ್ಧಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net