

ಬೆಂಗಳೂರು ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಮತ್ತು ನಾರಾಯಣಗುರು ಭವನ ನಿರ್ಮಿಸಬೇಕು ಎನ್ನುವ ಸಮುದಾಯದ ಬೇಡಿಕೆಗೆ ಒಪ್ಪಿದ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಎರಡು ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಿಮ್ಮೊಂದಿಗೆ ನಾನಿದ್ದೇನೆ. ಯಾವುದೇ ಆತಂಕ ಬೇಡ ಎಂದು ಹೇಳಿದರು.
ನಾವೆಲ್ಲರೂ ದೇವಸ್ಥಾನಗಳನ್ನು ಚಿಕ್ಕದಾಗಿ ಮತ್ತು ಶಾಲೆಗಳನ್ನು ದೊಡ್ಡದಾಗಿ ಕಟ್ಟುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸೋಣ. - ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ