ಮಕ್ಕಳಿಗೆ ಮಾನವೀಯ ಮೌಲ್ಯವುಳ್ಳ ಶಿಕ್ಷಣ ನೀಡಿ

02 tnp photo vv 02
Published on

ತಿ.ನರಸೀಪುರ: ಸಮಾಜದಲ್ಲಿ ಜವಾಬ್ದಾರಿಯುತ ಪ್ರಜೆಯಾಗಿ ರೂಪುಗೊಳ್ಳಬೇಕಾದರೆ ಮಕ್ಕಳಿಗೆ ಮಾನವೀಯ ಮೌಲ್ಯ ತಿಳಿಸುವ ಶಿಕ್ಷಣ ಅಗತ್ಯ ಎಂದು ಶಾಸಕ ಎಂ.ಅಶ್ವಿನ್ ಕುಮಾರ್ ಹೇಳಿದರು.

ಪಟ್ಟಣದ ಟಿಎಪಿಸಿಎಂಎಸ್ ರೈತ ಭವನ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಎನ್‌ಕೆಎಫ್ ಪಬ್ಲಿಕ್ ಪೂರ್ವ ಮತ್ತು ಹಿರಿಯ ಪ್ರಾಥಮಿಕ ಶಾಲೆಯ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಹಾಗೂ ಸಾಧಕರ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿರುವ ಎನ್.ಕೆ ಫರೀದ್ ಅವರು ಗ್ರಾಮೀಣ ಮಕ್ಕಳಿಗೆ ಶಿಕ್ಷಣ ನೀಡುವ ಕಾಯಕವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಶಾಲೆಗಳು ವಿದ್ಯಾರ್ಥಿಗಳ ಬಹುಮುಖ ಪ್ರತಿಭೆಯನ್ನ ಗುರುತಿಸಬೇಕು. ಆಗ ವಿದ್ಯಾರ್ಥಿಗಳು ಸಾಧನೆ ಮಾಡಲು ಸಾಧ್ಯ ಎಂದರು.

ವಾಟಾಳು ಮಠದ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು. ಕಳೆದ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿನಿ ಯಶಸ್ವಿನಿ ರಾಜ್, ಸಾರ್ವಜನಿಕ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ಗೋವಿಂದ ಶೆಟ್ಟಿ ಹಾಗೂ ಪುರಸಭೆ ಹಿರಿಯ ಆರೋಗ್ಯ ಅಧಿಕಾರಿ ಚೇತನ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಎನ್‌ಕೆಎಫ್ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷ ಎನ್.ಕೆ.ಫರೀದ್, ಪುರಸಭೆ ಸದಸ್ಯರಾದ ಮಹಮ್ಮದ್ ಸಯೀದ್, ಎಲ್.ಮಂಜುನಾಥ್, ಎನ್.ಸೋಮು, ಬಿಇಒ ಎಸ್.ಸ್ವಾಮಿ, ಸಮಾಜ ಸೇವಕ ಮಹಮದ್ ನಸ್ರುಲ್ಲಾ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಸಂಚಾಲಕ ಬಿ.ಮನ್ಸೂರ್ ಆಲಿ, ದೈಹಿಕ ಪರಿವೀಕ್ಷಕ ಮಹಾಂತಪ್ಪ ನಾಗೂರ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net