

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಪ್ರೊ. ಕೆ.ವಿ. ಕೋದಂಡರಾಮಯ್ಯ ಅವರು ಸೋಮವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಮಂಗಳವಾರ ಮಧ್ಯಾಹ್ನ 2 ಗಂಟೆಯವರೆಗೆ ಬೆಂಗಳೂರು ನಗರದ ಕಾವಲು ಬೈರಸಂದ್ರದಲ್ಲಿರುವ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶವಿದೆ.
ನಂತರ ಮಂಗಳವಾರ ಸಂಜೆ 4.30ಕ್ಕೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕಾಡನೂರು ಪಾಳ್ಯ ಗ್ರಾಮದಲ್ಲಿ ಅಂತಿಮ ಸಂಸ್ಕಾರವನ್ನು ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.