

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ತತ್ಸಮಾನ ವೃಂದದ ವಿವಿಧ 30 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.
ಬೆಂಗಳೂರು ದಕ್ಷಿಣ, ಮೈಸೂರು, ಬೆಳಗಾವಿ ಜಿಲ್ಲಾ ಉಪ ನಿರ್ದೇಶಕರು, ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ಆಯುಕ್ತಕ ಕಚೇರಿ, ಡಯಟ್ ಪ್ರಾಂಶುಪಾಲರು ಸೇರಿ ವಿವಿಧ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.