

ಬೆಂಗಳೂರು : 1 ರಿಂದ 9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಫಲಿತಾಂಶವನ್ನು ಸ್ಟೂಡೆಂಟ್ ಅಚೀವ್ಮೆಂಟ್ ಟ್ರಾಕಿಂಗ್ ಸಿಸ್ಟಂ(ಎಸ್ಎಟಿಎಸ್) ಮೂಲಕ ಅಪ್ಲೋಡ್ ಮಾಡಲು ನಿಗದಿ ಪಡಿಸಿದ್ದ ಕೊನೆಯ ದಿನಾಂಕವನ್ನು ರಾಜ್ಯ ಶಿಕ್ಷಣ ಇಲಾಖೆ ವಿಸ್ತರಿಸಿದೆ.
ರಾಜ್ಯದಲ್ಲಿ ಸೆಮಿಲಾಕ್ಡೌನ್ ಜಾರಿಯಲ್ಲಿರುವುದರಿಂದ ಶಿಕ್ಷಕರು ಕಚೇರಿಗೆ ಬರುತ್ತಿಲ್ಲ. ಇದರಿಂದ ವಿದ್ಯಾರ್ಥಿ ಸಾಧನೆಯ ಟ್ರ್ಯಾಕಿಂಗ್ ವ್ಯವಸ್ಥೆಯಾದ ಎಸ್ಎಟಿಎಸ್ನಲ್ಲಿ ಅಪ್ಲೋಡ್ ಮಾಡುವುದು ಕಷ್ಟವೆಂದು ಹೇಳಿ ದಿನಾಂಕವನ್ನು ವಿಸ್ತರಿಸಬೇಕೆಂದು ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘ (ರುಪ್ಸಾ, ಕರ್ನಾಟಕ) ಇಲಾಖೆಯನ್ನು ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸಿರುವ ಇಲಾಖೆಯು, ರಾಜ್ಯದಲ್ಲಿ ಲಾಕ್ಡೌನ್ ಮುಗಿದ ಮೂರು ದಿನಗಳೊಳಗೆ ಅಪ್ಲೋಡ್ ಮಾಡಲು ಅವಕಾಶ ನೀಡಿದೆ. ರಾಜ್ಯದ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ ಈ ಬಗ್ಗೆ ಸೂಚನೆ ನೀಡಿದೆ.