

ಬೆಂಗಳೂರು: ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ದೇಶಾದ್ಯಂತ ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಅನುಮತಿ ನೀಡಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಗಳನ್ನು ಹೊರ ರಾಜ್ಯಗಳಿಗೆ ಕರೆದೊಯ್ಯಲು ಜಿಲ್ಲಾ ಉಪನಿರ್ದೇಶಕರು ಇಲಾಖೆಯಿಂದ ಅನುಮತಿ ಕೇಳಿದ್ದರು. ಇದಕ್ಕೆ ಇಲಾಖೆಯು ರಾಜ್ಯ ಮಾತ್ರವಲ್ಲ, ಭಾರತದಾದ್ಯಂತ ಪ್ರವಾಸ ಕೈಗೊಳ್ಳಲು ಅನುಮತಿ ನೀಡಿದೆ.
ಅಲ್ಲದೆ, ಭಾರತೀಯ ರೈಲುಗಳಲ್ಲೂ ಪ್ರವಾಸ ಕೈಗೊಳ್ಳಬಹುದು. ಇದಕ್ಕೆ ಷರತ್ತುಗಳನ್ವಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅನುಮತಿ ನೀಡಬಹುದು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ. ಕಾವೇರಿ ಸುತ್ತೋಲೆ ಹೊರಡಿಸಿದ್ದಾರೆ.