

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪ್ರಸ್ತುತ ಕನ್ನಡ ಹಾಗೂ ಇತರೆ ಮಾಧ್ಯಮ ಬೋಧಿಸುತ್ತಿರುವ 984 ಶಾಲೆಗಳಲ್ಲಿ ಆಂಗ್ಲ (ದ್ವಿ ಭಾಷಾ) ಮಾಧ್ಯಮ ತರಗತಿಗಳನ್ನು ಆರಂಭಿಸಲು ಶಾಲಾ ಶಿಕ್ಷಣ ಇಲಾಕೆಯು ಅನುಮತಿ ನೀಡಿದೆ.
ಒಂದನೇ ತರಗತಿಯಿಂದಲೇ ಪ್ರಸ್ತುತ ಕನ್ನಡ ಮಾಧ್ಯಮ ಬೋಧಿಸುತ್ತಿರುವ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಆರಂಭಿಸಲು ಅನುಮತಿ ನೀಡಲಾಗಿದೆ.
ಕೂಡಲೇ ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ಹಾಗೂ ಶಾಲೆಯಲ್ಲಿ ಇಎಂಟಿಐಪಿ ತರಬೇತಿ ಪಡೆದ ಶಿಕ್ಷಕರು ಲಭ್ಯವಿದ್ದಲ್ಲಿ ಅಂತಹ ಶಿಕ್ಷಕರೇ ಆಂಗ್ಲ ಮಾಧ್ಯಮವನ್ನು ಬೋಧಿಸುವಂತೆ ಕ್ರಮ ಮಾಡಲು ಸಂಬಂಧಿಸಿದ ಎಲ್ಲ ಇಲಾಖಾ ಅಧಿಕಾರಿಗಳಿಗೆ ಹಾಗೂ ಶಾಲಾ ಮುಖ್ಯಸ್ಥರಿಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ಮಾತೃ ಭಾಷೆಯ ಜತೆಗೆ ಆಂಗ್ಲ ಭಾಷೆಯ ಕೌಶಲ ಬೆಳೆಸಲು 2025-26ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಪ್ರಸ್ತುತ ಇರುವ ಕನ್ನಡ ಮಾಧ್ಯಮದ ಜತೆಗೆ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸುವ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಸಚಿವರು, ಜನಪ್ರತಿನಿಧಿಗಳು, ಇಲಾಖೆ ಅಧಿಕಾರಿಗಳು ಶಿಾರಸು ಮಾಡಿರುವ ಪತ್ರಗಳು ಮತ್ತು ಮನವಿಗಳ ಆಧಾರದಲ್ಲಿ 984 ಶಾಲೆಗಳಲ್ಲಿ ದ್ವಿ ಭಾಷಾ ತರಗತಿಗಳನ್ನು ಆರಂಭಿಸಲು ಅನುಮೋದನೆ ನೀಡಲಾಗಿದೆ ಎಂದು ತಿಳಿಸಲಾಗಿದೆ.